Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:3 - ಕನ್ನಡ ಸತ್ಯವೇದವು J.V. (BSI)

3 ನೀನು ನೀತಿವಂತನಾಗಿರುವದು ಸರ್ವಶಕ್ತನಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀನು ಸಜ್ಜನನಾಗಿದ್ದರೆ ಅದರಿಂದ ಸರ್ವಶಕ್ತನಿಗೆ ಸುಖವೇ? ನಿನ್ನ ನಿರ್ದೋಷ ನಡತೆಯಿಂದ ಆತನಿಗೆ ಲಾಭವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ನಡತೆಯು ಒಳ್ಳೆಯದಾಗಿದ್ದರೆ, ಅದರಿಂದ ದೇವರಿಗೆ ಸಹಾಯವಾಗುವುದೇ? ಇಲ್ಲ. ನೀನು ನೀತಿವಂತನಾಗಿದ್ದರೆ ಸರ್ವಶಕ್ತನಾದ ದೇವರಿಗೆ ಅದರಿಂದೇನಾದರೂ ಲಾಭವಾಗುವುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀನು ನೀತಿವಂತನಾಗಿದ್ದರೆ, ಸರ್ವಶಕ್ತರಿಗೆ ಮೆಚ್ಚಿಕೆಯೋ? ನಿನ್ನ ಮಾರ್ಗಗಳು ನಿರ್ದೋಷವಾಗಿದ್ದರೆ, ದೇವರಿಗೆ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:3
20 ತಿಳಿವುಗಳ ಹೋಲಿಕೆ  

ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ.


ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ; ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು, ಅವರೇ ಆತನಿಗೆ ಇಷ್ಟ, ನ್ಯಾಯತೀರಿಸುವ ದೇವರು ಎಲ್ಲಿಯೋ ಎಂದು ನೀವು ಅಂದುಕೊಳ್ಳುವದರಲ್ಲಿಯೇ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ಸುಳ್ಳುತುಟಿ ಯೆಹೋವನಿಗೆ ಹೇಸು; ಸತ್ಯವಂತರು ಆತನಿಗೆ ಲೇಸು.


ವಕ್ರಹೃದಯರು ಯೆಹೋವನಿಗೆ ಅಸಹ್ಯರು; ಸನ್ಮಾರ್ಗಿಗಳು ಆತನ ದಯೆಗೆ ಆಸ್ಪದರು.


ಮೋಸದ ತ್ರಾಸು ಯೆಹೋವನಿಗೆ ಅಸಹ್ಯ; ನ್ಯಾಯದ ತೂಕ ಆತನಿಗೆ ಸಂತೋಷ.


ನನ್ನ ನಡತೆಯನ್ನು ಶೋಧಿಸಿದೆನು. ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.


ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು; ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕುಕ್ಕೆಹಾಕಿಕೊಂಡಿರುವೆನು ಅಂದುಕೊಂಡೆನು.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದೀ ಎಂಬದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವೇಚ್ಫೆಯಿಂದಲೇ ನಿನಗೆ ಕಾಣಿಕೆಗಳನ್ನರ್ಪಿಸಿದ್ದಾರೆಂದು ನೋಡಿ ಸಂತೋಷಿಸುತ್ತೇನೆ.


ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಮನುಷ್ಯಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು? ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೇ ಪ್ರಯೋಜನವಷ್ಟೆ.


ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ?


ನೀನು ನೀತಿವಂತನಾಗಿದ್ದರೆ ಆತನಿಗೇನು ಕೊಟ್ಟಂತಾಯಿತು? ನಿನ್ನ ಕೈಯಿಂದ ಆತನಿಗೆ ಲಾಭವೇನು?


ಆ ಸರ್ವಶಕ್ತನು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆಮಾಡುವದರಿಂದ ಪ್ರಯೋಜನವೇನು? ಎಂದೂ ಹೇಳುತ್ತಿದ್ದರು.


ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ ಅವನಿಗೆ ಯಾವ ಪ್ರಯೋಜನವೂ ಇಲ್ಲವೆಂದು ಹೇಳಿದ್ದಾನಷ್ಟೆ.


ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು