Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:9 - ಕನ್ನಡ ಸತ್ಯವೇದವು J.V. (BSI)

9 ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಿಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಿಧವೆಯರನ್ನು ಬರಿಗೈಯಲ್ಲಿ ಕಳಿಸಿಬಿಟ್ಟೆ ತಬ್ಬಲಿಯ ಕೈಗಳನು ನೀನು ಮುರಿದುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ವಿಧವೆಯರಿಗೆ ದಾನಮಾಡದೆ ಅವರನ್ನು ನೀನು ಕಳುಹಿಸಿಬಿಟ್ಟಿರಬಹುದು. ಒಂದುವೇಳೆ ನೀನು ಅನಾಥರಿಗೆ ಮೋಸಮಾಡಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ವಿಧವೆಯರನ್ನು ಬರಿದಾಗಿ ಕಳುಹಿಸಿಬಿಟ್ಟೆ; ದಿಕ್ಕಿಲ್ಲದವರ ತೋಳುಗಳನ್ನು ಮುರಿದುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:9
20 ತಿಳಿವುಗಳ ಹೋಲಿಕೆ  

ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ [ಎಂಬದೇ].


ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ;


ನಿನ್ನವರು ತಾಯಿತಂದೆಗಳನ್ನು ತುಚ್ಫೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ಅನ್ಯಾಯವಾದ ತೀರ್ಪುಗಳನ್ನು ತೀರಿಸಿ ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ!


ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು ಅನಾಥನ ಮೇಲೆ ಕೈಮಾಡಿದೆನೋ?


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧನಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವದನ್ನೂ, ಮುರಿದದನ್ನೂ ತೀರಾ ಮುರಿದುಬಿಟ್ಟು ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು.


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಸದಾಚಾರವನ್ನು ಅಭ್ಯಾಸಮಾಡಿರಿ; ನ್ಯಾಯನಿರತರಾಗಿರಿ, ಹಿಂಸಕನನ್ನು ತಿದ್ದಿ ಸರಿಪಡಿಸಿರಿ, ಅನಾಥನಿಗೆ ನ್ಯಾಯತೀರಿಸಿರಿ, ವಿಧವೆಯ ಪಕ್ಷವಾಗಿ ವಾದಿಸಿರಿ.


ವಿಧವೆಯನ್ನೂ ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.


ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.


ದುಷ್ಟನ ಭುಜಬಲವನ್ನು ಮುರಿದುಹಾಕು; ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲ ಮಾಡಿಬಿಡು.


ಅವರು - ಪರದೇಶಿ, ತಾಯಿತಂದೆಯಿಲ್ಲದವ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ನೀವು ಚೀಟಿಹಾಕಿ ಅನಾಥನನ್ನು ತೆಗೆದುಕೊಳ್ಳುವವರು; ಸ್ನೇಹಿತನನ್ನೂ ವಿಕ್ರಯಿಸುವವರು.


ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು