ಯೋಬ 23:10 - ಕನ್ನಡ ಸತ್ಯವೇದವು J.V. (BSI)10 ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ನನ್ನ ಪ್ರತಿಯೊಂದು ಹೆಜ್ಜೆಯನ್ನೂ ದೇವರು ಬಲ್ಲನು. ಆತನು ನನ್ನನ್ನು ಪರೀಕ್ಷಿಸಿ ನೋಡಿದಾಗ ನಾನು ಅಪ್ಪಟ ಬಂಗಾರದಂತಿರುವುದನ್ನು ಕಂಡುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು. ಅಧ್ಯಾಯವನ್ನು ನೋಡಿ |
ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.