Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:15 - ಕನ್ನಡ ಸತ್ಯವೇದವು J.V. (BSI)

15 ಆದಕಾರಣ ನಾನು ಆತನ ಸನ್ನಿಧಿಗೆ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಅಂಜುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಹೆದರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ಕಾರಣ ಆತನ ಸನ್ನಿಧಿಯಲಿ ನಾನು ಅಂಜುಬುರುಕ ಇದನ್ನು ನೆನೆದು ಮನದಲಿ ನಾನು ಭಯಪೀಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಭಯಭ್ರಾಂತನಾಗಿದ್ದೇನೆ. ಇದನ್ನೆಲ್ಲಾ ಯೋಚಿಸುವಾಗ ಹೆದರಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ನಾನು ದೇವರ ಮುಂದೆ ಗಾಬರಿಗೊಳ್ಳುತ್ತೇನೆ; ಇದನ್ನೆಲ್ಲಾ ಗ್ರಹಿಸಿಕೊಳ್ಳುವಾಗ ನಾನು ದೇವರಿಗೆ ಭಯಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:15
8 ತಿಳಿವುಗಳ ಹೋಲಿಕೆ  

ನಿನ್ನ ಭಯದಿಂದ ನನ್ನ ಮಾಂಸವು ಕಂಪಿಸುತ್ತದೆ; ನಿನ್ನ ವಿಧಿಗಳಿಗೆ ಅಂಜಿಕೊಂಡಿದ್ದೇನೆ.


ಅದು ನನಗೆ ಕೇಳಿಸಲು ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ವಿಪತ್ಕಾಲವು ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವಾಗ ನಾನು ಅದನ್ನು ತಾಳ್ಮೆಯಿಂದ ಕಾದಿರಬೇಕೆಂದು ನನಗೆ ತಿಳಿಯಲು ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು.


ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.


ದೇವರಿಂದ ಬರುವ ವಿಪತ್ತಿಗೆ ಅಂಜಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವದಕ್ಕಾಗಲಿಲ್ಲ.


ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೇನು.


ಅಯ್ಯೋ, ನಾನು ದುರ್ಮಾರ್ಗಿಯಾದರಂತು ನನಗೇನು ಗತಿ! ನಾನು ಸನ್ಮಾರ್ಗಿಯಾದರೂ ನನ್ನ ಶ್ರಮೆಗಳನ್ನು ನೋಡುತ್ತಾ ಅಪಮಾನಭರಿತನಾಗಿ ತಲೆಯೆತ್ತಲಾರೆನು.


ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವನಷ್ಟೆ, ಆತನಲ್ಲಿ ಇಂಥಾ ಸಂಕಲ್ಪಗಳು ಅನೇಕವಾಗಿವೆ.


ನನ್ನ ಹೃದಯವನ್ನು ಕುಂದಿಸಿದವನು ದೇವರೇ, ನನ್ನನ್ನು ಗಾಬರಿಪಡಿಸಿದವನು ಸರ್ವಶಕ್ತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು