Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:16 - ಕನ್ನಡ ಸತ್ಯವೇದವು J.V. (BSI)

16 ನನ್ನ ಹೃದಯವನ್ನು ಕುಂದಿಸಿದವನು ದೇವರೇ, ನನ್ನನ್ನು ಗಾಬರಿಪಡಿಸಿದವನು ಸರ್ವಶಕ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನ್ನ ಹೃದಯವನ್ನು ಕುಂದಿಸಿದವನು ದೇವರೇ, ನನ್ನನ್ನು ಗಾಬರಿಪಡಿಸಿದವನು ಸರ್ವಶಕ್ತನಾದ ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೇವರೇ ನನ್ನ ಶಕ್ತಿಯನು ಕುಂದಿಸಿಹನು ಸರ್ವಶಕ್ತ ನನ್ನನು ಆತಂಕಗೊಳಿಸಿಹನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಹೃದಯವನ್ನು ಕುಂದಿಸಿದವನೂ ದೇವರೇ. ನನ್ನನ್ನು ಭಯಭ್ರಾಂತನನ್ನಾಗಿ ಮಾಡಿದವನೂ ಸರ್ವಶಕ್ತನಾದ ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇವರು ನನ್ನ ಹೃದಯವನ್ನು ಹೆದರಿಸಿದ್ದಾರೆ; ಸರ್ವಶಕ್ತರು ನನ್ನನ್ನು ಗಾಬರಿಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:16
11 ತಿಳಿವುಗಳ ಹೋಲಿಕೆ  

ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಸಡಲಿಹೋಗಿವೆ. ನನ್ನ ಗುಂಡಿಗೆ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.


ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ [ಕೇಳಿರಿ]!


ಯೆಹೋವನ ದಿನವು ಸಮೀಪಿಸಿತು; ಅಯ್ಯೋ, ದಿನವೇ! ಅದು ಸರ್ವಶಕ್ತನಿಂದ ನಾಶನದಿನವಾಗಿಯೇ ಬರುವದು.


ನಾನು ಸರ್ವದಾ ವ್ಯಾಜ್ಯವಾಡೆನು, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯಾತ್ಮವೂ ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದದೆ. ನಿನ್ನಿಂದುಂಟಾದ ದಿಗಿಲಿನಿಂದ ಹಾಳಾದೆನು.


ಆಕೆಯು ಅವರಿಗೆ - ನನ್ನನ್ನು ನೊವೊವಿುಯೆಂದು ಕರೆಯಬೇಡಿರಿ; ಸರ್ವಶಕ್ತನು ನನ್ನನ್ನು ಬಹಳವಾಗಿ ದುಃಖಪಡಿಸಿದ್ದಾನೆ. ಆದದರಿಂದ ಮಾರಾ ಎಂದು ಕರೆಯಿರಿ.


ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರುಷ ಒಂದು ಸುದ್ದಿಯು, ಮತ್ತೊಂದು ವರುಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು.


ಆದಕಾರಣ ನಾನು ಆತನ ಸನ್ನಿಧಿಗೆ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಅಂಜುತ್ತೇನೆ.


ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದುಹಾಕಿದನು; ಕತ್ತು ಹಿಡಿದು ನನ್ನನ್ನು ಚೂರು ಚೂರು ಮಾಡಿದನು. ನನ್ನನ್ನು ಗುರಿಮಾಡಿಕೊಂಡಿದ್ದಾನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು