Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:2 - ಕನ್ನಡ ಸತ್ಯವೇದವು J.V. (BSI)

2 ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ ಆ ನನ್ನ ಮೂಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ; ಆ ನನ್ನ ಮುಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನನ್ನ ದುಃಖಪ್ರಲಾಪ ಈಗಲೂ ಕಟುವಾಗಿದೆ ನಾನು ನಿಟ್ಟುಸಿರಿಡುವಾಗಲೂ ದೇವರ ಹಸ್ತ ಭಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಾನಿನ್ನೂ ಸಂಕಟದಲ್ಲಿರುವುದರಿಂದ ಈ ಹೊತ್ತು ಸಹ ನಾನು ದೂರು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಂದಿಗೂ ನನ್ನ ದೂರು ಕಹಿಯಾಗಿದೆ; ನಾನು ನಿಟ್ಟುಸಿರಿಟ್ಟರೂ ದೇವರ ಹಸ್ತವು ಭಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:2
12 ತಿಳಿವುಗಳ ಹೋಲಿಕೆ  

ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ನೀರಿನಂತೆ ನನ್ನ ಶರೀರದ ಸಾರವೆಲ್ಲಾ ಬತ್ತಿಹೋಯಿತು. ಸೆಲಾ.


ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ!


ನಾನಂತೂ ಬಾಯಿಮುಚ್ಚುವದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.


ಆಗ ಯೋಬನು ಇಂತೆಂದನು -


ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೇನು.


ಅವನು ಅಪರಾಧವನ್ನಲ್ಲದೆ ದೇವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು ದೇವರಿಗೆ ವಿರುದ್ಧವಾಗಿ ಅಧಿಕಪ್ರಸಂಗ ಮಾಡುತ್ತಾನೆ ಎಂದು ನನಗೆ ಹೇಳುವರು.


ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ, ಸದ್ದಿಲ್ಲದೆ ಮೊರೆಯಿಡು,


ನನ್ನ ಮೇಲೆ ಇದನ್ನು ಹೇರಿದವನು ಯೆಹೋವನೇ ಎಂದು ಅವನು ಏಕಾಕಿಯಾಗಿ ಕೂತುಬಾಯಿ ಬಿಡದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು