Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:6 - ಕನ್ನಡ ಸತ್ಯವೇದವು J.V. (BSI)

6 ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯವಾಡುವನೋ? ಇಲ್ಲವೇ ಇಲ್ಲ; ನನ್ನ ವಿಜ್ಞಾಪನೆಯನ್ನು ಗಮನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯವಾಡುವನೋ? ಇಲ್ಲವೇ ಇಲ್ಲ; ನನ್ನ ವಿಜ್ಞಾಪನೆಯನ್ನು ಗಮನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆತ ನನ್ನೊಡನೆ ವ್ಯಾಜ್ಯವಾಡುವನೋ ಶಕ್ತಿಸಾಮರ್ಥ್ಯದಿಂದ? ಇಲ್ಲ, ಆಲಿಸುವನು ನನ್ನ ವಿಜ್ಞಾಪನೆಯನು ಗಮನದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ತನ್ನ ಮಹಾಶಕ್ತಿಯನ್ನು ನನಗೆ ವಿರೋಧವಾಗಿ ಬಳಸುವನೇ? ಇಲ್ಲ, ಆತನು ನನಗೆ ಕಿವಿಗೊಡುವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ನನ್ನನ್ನು ಕಠಿಣವಾಗಿ ವಿರೋಧಿಸುತ್ತಾರೋ? ಇಲ್ಲ, ಖಂಡಿತವಾಗಿ ಅವರು ನನ್ನ ವಿರುದ್ಧ ಆರೋಪಗಳನ್ನು ಹೊರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:6
12 ತಿಳಿವುಗಳ ಹೋಲಿಕೆ  

ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು, ನಿನ್ನ ದಿಗಿಲು ನನ್ನನ್ನು ಅಂಜಿಸದಿರಲಿ.


ದೇಶಗಳಿಂದ ನಿಮ್ಮನ್ನು ಕೂಡಿಸಿ ಜನಾಂಗಗಳ ಮಧ್ಯದ ಅರಣ್ಯಕ್ಕೆ ಕರತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು;


ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ವಿುತಿಮೀರದೆ ಹೋರಾಡುತ್ತಿದ್ದೀ; ಮೂಡಣ ಗಾಳಿಯು ಬೀಸಿದ ದಿನದಲ್ಲಿ ಅದರ ಕ್ರೂರವಾದ ಬಡಿತದಿಂದ ನಿನ್ನ ಜನವನ್ನು ತೊಲಗಿಸಿದಿ.


ರೌದ್ರವು ನನ್ನಲಿಲ್ಲ; ಮುಳ್ಳುಗಿಳ್ಳು ನನಗೆ ಎದುರುಬಿದ್ದರೆ ಎಷ್ಟೋ ಒಳ್ಳೇದು! ಅವುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ನಡೆದು ಹೋಗಿ ಒಟ್ಟಿಗೆ ಸುಟ್ಟುಬಿಡುವೆನು.


ನಾನು ಬಲಿಷ್ಠನ ಶಕ್ತಿಯನ್ನು ಮರೆಹೊಗುವೆನೆಂದರೆ [ದೇವರು] - ಇಗೋ, [ಇದ್ದೇನೆ; ಅನ್ನುವನು] ನ್ಯಾಯವಿಚಾರಣೆಯು [ಆಗಲಿ ಎಂದರೆ ಆತನು] ನನಗೆ ಕಾಲನಿಯಾಮಕರು ಯಾರು [ಅನ್ನುವನು].


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು; ಆತನಿಗೆ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.


ಆತನೊಂದಿಗೆ ವ್ಯಾಜ್ಯವಾಡಬೇಕೆಂದು ಇಷ್ಟಪಟ್ಟರೂ ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು.


ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು ಆತನು ನನಗೆ ಹೇಳುವದನ್ನು ವಿವೇಚಿಸೇನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು