Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:18 - ಕನ್ನಡ ಸತ್ಯವೇದವು J.V. (BSI)

18 [ನೀವು ಹೇಳುವದೇನಂದರೆ]- ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವದು. ದ್ರಾಕ್ಷೇತೋಟಗಳ ಕಡೆಗೆ ತಿರುಗಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 (ನೀವು ಹೇಳುವುದೇನೆಂದರೆ) ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವುದು. ದ್ರಾಕ್ಷಿತೋಟಗಳ ಕಡೆಗೆ ತಿರುಗಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ದುರುಳನನು ಕೊಚ್ಚಿಕೊಂಡುಹೋಗುವುದು ಪ್ರವಾಹ ಪೊಡವಿಯಲ್ಲಿನ ಅವನ ಆಸ್ತಿ ಶಾಪಗ್ರಸ್ತ ಅವನು ದ್ರಾಕ್ಷಿತೋಟಗಳ ಕಡೆಗೂ ಸುಳಿಯಲಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನೀವು ಹೇಳುವುದೇನೆಂದರೆ, ‘ಪ್ರವಾಹವು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ನಾಶನವು ದುಷ್ಟರನ್ನು ಕೊಚ್ಚಿಕೊಂಡು ಹೋಗುವುದು. ಅವರ ಜಮೀನು ಶಾಪಗ್ರಸ್ತವಾಗಿದೆ. ಆದ್ದರಿಂದ ಅವರು ದ್ರಾಕ್ಷಿಹಣ್ಣುಗಳನ್ನು ತಮ್ಮ ತೋಟಗಳಿಂದ ಸಂಗ್ರಹಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಆದರೂ ಅವರು ನೀರಿನ ಮೇಲಿನ ಗುಳ್ಳೆಯಂತೆ ಇದ್ದಾರೆ. ಅವರ ಜಮೀನು ಶಾಪಕ್ಕೆ ಒಳಪಟ್ಟಿರುವುದರಿಂದ, ಯಾರೂ ಅವರ ದ್ರಾಕ್ಷೆಯ ತೋಟಕ್ಕೆ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:18
14 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮಂದಟ್ಟುಮಾಡಿಕೊಳ್ಳದಿದ್ದರೆ ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮಂದಟ್ಟುಮಾಡಿಕೊಳ್ಳದ ಕಾರಣ ಅವುಗಳನ್ನು ಶಪಿಸೇ ಇದ್ದೇನೆ.


ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ದೇಶವನ್ನು ಆವರಿಸು; ನಡುಕಟ್ಟು [ಸಡಲಿತು], ಇನ್ನಿಲ್ಲ.


ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.


ಅವರ ಊಟವೇ ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.


ಕ್ಷಣದಲ್ಲಿ ಹರಿದು ಕಾಣದೆಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.


ಅಕಾಲಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು.


ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ.


ಮೂರ್ಖನು ಬೇರೂರುವದನ್ನು ನಾನು ನೋಡಿದೆನು; ಕೂಡಲೆ ಅವನ ನಿವಾಸವು ಶಾಪಗ್ರಸ್ತವೆನ್ನುವದಕ್ಕೆ ಆಸ್ಪದವಾಯಿತು.


ಇದಲ್ಲದೆ ಮುಂಗಾಣದ ಕತ್ತಲೂ ಜಲಪ್ರವಾಹವೂ ನಿನ್ನನ್ನು ಆವರಿಸಿರುತ್ತವೆ.


ತಮ್ಮ ಹೊಟ್ಟೆಗಾಗಿ ಬೈಲಿನಲ್ಲಿ ಸೊಪ್ಪುಸೆದೆಯನ್ನು ಕೊಯ್ದುಕೊಳ್ಳುವರು, ದುಷ್ಟನ ದ್ರಾಕ್ಷೇತೋಟದಲ್ಲಿ ಹಕ್ಕಲಾಯುವರು.


ಯಜಮಾನರ ಪೌಳಿಗೋಡೆಗಳೊಳಗೇ ಇದ್ದುಕೊಂಡು ಎಣ್ಣೆಗಾಣವನ್ನು ಆಡಿಸುವರು; ದಾಹಗೊಂಡೇ ಅವರ ತೊಟ್ಟಿಗಳಲ್ಲಿ ದ್ರಾಕ್ಷೆಯನ್ನು ತುಳಿಯುವರು.


ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು