Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:19 - ಕನ್ನಡ ಸತ್ಯವೇದವು J.V. (BSI)

19 ಬರಗಾಲವೂ ಬಿಸಿಲೂ ಹಿಮದ ನೀರನ್ನು ಹೀರುವ ಹಾಗೆ ಪಾತಾಳವು ಪಾಪಿಗಳನ್ನು ಎಳೆದುಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬರಗಾಲವೂ, ಬಿಸಿಲೂ ಹಿಮದ ನೀರನ್ನು ಹೀರುವ ಹಾಗೆ, ಪಾತಾಳವು ಪಾಪಿಗಳನ್ನು ಎಳೆದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬರಗಾಲ-ಬೇಸಿಗೆ ಹಿಮವನು ಹೀರಿಕೊಳ್ಳುವಂತೆ ಪಾತಾಳದ ಕೂಪ ಪಾಪಿಯನು ಸೆಳೆದುಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬರಗಾಲವೂ ಬಿಸಿಲೂ ಹಿಮದ ನೀರನ್ನು ಹೀರುವಂತೆ ಪಾತಾಳವು ದುಷ್ಟರನ್ನು ಎಳೆದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಬರಗಾಲದ ಬಿಸಿಲು ಹಿಮದ ನೀರನ್ನು ಹೀರಿಕೊಳ್ಳುವಂತೆ, ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:19
12 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ಸ್ವಲ್ಪ ಕಾಲದ ಮೇಲೆ ಆ ಭಿಕ್ಷಗಾರನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡುಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರಕ್ರಿಯೆಗಳು ಆದವು.


ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು.


ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು ಕ್ಷಣಮಾತ್ರದಲ್ಲಿ [ಅನಾಯಾಸವಾಗಿ] ಸಮಾಧಿಗೆ ಇಳಿಯುವರು.


ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಹೊಗೆಯು [ಗಾಳಿಯಿಂದ] ಹೇಗೋ ಹಾಗೆ ಅವರು ಆತನಿಂದ ಹಾರಿಹೋಗುವರು; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗುವರು.


ಒಬ್ಬನು ಸಮೃದ್ಧನಾಗಿ ತುಂಬಾ ಸುಖದಿಂದಲೂ ನೆಮ್ಮದಿಯಿಂದಲೂ ಇರುವಾಗ ಸಾಯುವನು.


ಹಾಗಿಲ್ಲದಿದ್ದರೆ ನಾನು ಮಲಗಿ ಸುಮ್ಮನಿದ್ದು ನಿದ್ರೆಮಾಡುತ್ತಿದ್ದೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು