Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:2 - ಕನ್ನಡ ಸತ್ಯವೇದವು J.V. (BSI)

2 ಮೇರೆಗಳನ್ನು ಸರಿಸಿಕೊಳ್ಳುವವರುಂಟು, ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೇರೆಗಳನ್ನು ದಾಟಿ ಆಶ್ರಯಿಸಿಕೊಳ್ಳುವವರು ಇದ್ದಾರೆ. ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಎಲ್ಲೆ ಮೇರೆಗಳನ್ನು ಸರಿಸಿಕೊಳ್ಳುವವರುಂಟು ಅಪಹರಿಸಿಕೊಂಡ ದನಕುರಿಗಳನ್ನು ಸಾಕಿಕೊಳ್ಳುವವರುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಜಮೀನಿನ ಮೇರೆಯನ್ನು ಸರಿಸುವವರೂ ಇದ್ದಾರೆ. ದನಕುರಿಗಳನ್ನು ಅಪಹರಿಸಿಕೊಂಡು ಹೋಗುವವರೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕೆಲವರು ಗಡಿಗಳ ಕಲ್ಲುಗಳನ್ನು ಬದಲಿಸುತ್ತಾರೆ, ಕದ್ದ ಮಂದೆಗಳನ್ನು ತೆಗೆದುಕೊಂಡು ಸಾಕಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:2
10 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವಾಸ್ತ್ಯದಲ್ಲಿ ನೆರೆಯವನ ಭೂವಿುಯ ಪೂರ್ವಕಾಲದ ಮೇರೆಯನ್ನು ಒತ್ತಬಾರದು.


ಪೂರ್ವಕಾಲದ ಮೇರೆಯನ್ನು ಒತ್ತಬೇಡ; ಅನಾಥರ ಹೊಲಗಳಲ್ಲಿ ನುಗ್ಗದಿರು.


ಅವರು - ಮತ್ತೊಬ್ಬನ ಮೇರೆಯನ್ನು ಸರಿಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ಒತ್ತಬೇಡ.


ಯೆಹೂದದ ಮುಖಂಡರು ಮೇರೆಯನ್ನು ಒತ್ತುವವರಂತಿದ್ದಾರೆ; ಅವರ ಮೇಲೆ ನನ್ನ ರೌದ್ರವನ್ನು ನೀರಿನ ಹಾಗೆ ಹೊಯ್ದುಬಿಡುವೆನು.


ಹಸಿದವನು ಅವರ ಬೆಳೆಯನ್ನು ಮುಳ್ಳು ಬೇಲಿಯೊಳಗಿಂದಲೇ ತಿಂದುಬಿಡುವನು. ಅವರ ಸೊತ್ತನ್ನು ನುಂಗಲು ಬೋನು ಬಾಯಿ ತೆರೆದಿದೆ.


ಅಷ್ಟರಲ್ಲಿ ಇನ್ನೊಬ್ಬನು ಬಂದು ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು; ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತಮಾಡಿದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು.


ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು; ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಎಂದು ಹೇಳಿದನು.


ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.


ನನ್ನ ಭೂವಿುಯು ನನ್ನ ಮೇಲೆ ಕೂಗಿಕೊಂಡರೆ ಅದರ ನೇಗಿಲಗೆರೆಗಳೆಲ್ಲಾ ಅತ್ತರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು