Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:20 - ಕನ್ನಡ ಸತ್ಯವೇದವು J.V. (BSI)

20 ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವದು; ಹುಳವು ಅವನ ಹೆಣವನ್ನು ರುಚಿಯಿಂದ ತಿನ್ನುವದು; ಇನ್ನು ಮೇಲೆ ಅವನ ನೆನಪಿರದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವುದು; ಹುಳವು ಅವನ ಹೆಣವನ್ನು ಸವಿದು ತಿನ್ನುವುದು; ಇನ್ನು ಮೇಲೆ ಯಾರಿಗೂ ಅವನ ನೆನಪಿರದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೆತ್ತಕರುಳೇ ಅವನನು ಮರೆತುಬಿಡುವುದು ಹುಳು ಅವನ ಹೆಣವನು ಆಸೆಯಿಂದ ಕಬಳಿಸುವುದು. ಇನ್ನು ಅವನ ನೆನಪು ಯಾರಿಗೂ ಇರದು ಅಕ್ರಮವು ಮುರಿದುಬಿದ್ದ ಮರದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸತ್ತುಹೋದ ದುಷ್ಟನನ್ನು ಅವನ ತಾಯಿಯೂ ಮರೆತುಬಿಡುವಳು. ದುಷ್ಟನ ದೇಹವನ್ನು ಹುಳಗಳು ತಿಂದುಬಿಡುತ್ತವೆ. ಅವನನ್ನು ಇನ್ನೆಂದಿಗೂ ಜ್ಞಾಪಿಸಿಕೊಳ್ಳುವುದಿಲ್ಲ. ದುಷ್ಟನು ಬಿದ್ದುಹೋದ ಮರದಂತೆ ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೆತ್ತ ಕರುಳು ಅಂಥವರನ್ನು ಮರೆತು ಬಿಡುವುದು; ಹುಳವು ಅಂಥವರ ಹೆಣವನ್ನು ರುಚಿಯಿಂದ ತಿಂದುಬಿಡುವುದು; ಇನ್ನು ಅವರ ನೆನಪು ಇರುವುದಿಲ್ಲ; ಮರದ ಹಾಗೆ ದುಷ್ಟರು ಮುರಿದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:20
14 ತಿಳಿವುಗಳ ಹೋಲಿಕೆ  

ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ; ದುಷ್ಟರ ನಾಮವು ನಿರ್ನಾಮ.


ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!


ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ನೀನು ಆ ಒಡೆಯರ ಮೇಲೆ ಕೈಮಾಡಿ ನಿರ್ಮೂಲಪಡಿಸಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದೀ; ಸತ್ತವರು ಪುನಃ ಬದುಕುವದಿಲ್ಲ, ಪ್ರೇತಗಳು ಎದ್ದು ಬರುವದಿಲ್ಲವಲ್ಲಾ.


ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವದನ್ನು ಕಂಡೆನು, ಅವರು [ಸುಖವಾಗಿ] ಗತಿಸಿದರು; ಧಾರ್ಮಿಕರೋ ಪರಿಶುದ್ಧಸ್ಥಾನದಿಂದ ತೊಲಗಬೇಕಾಯಿತು, ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು; ಇದೂ ವ್ಯರ್ಥ.


ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ ನಿರ್ದೇಹನಾಗಿ ದೇವರನ್ನು ನೋಡುವೆನು;


ಶ್ಮಶಾನವನ್ನು, ನೀನು ನನ್ನ ತಂದೆ ಎಂದೂ ಹುಳವನ್ನು, ನನ್ನ ತಾಯಿ, ನನ್ನ ತಂಗಿ ಎಂದೂ ಕರೆಯುವದಾದರೆ


ಹಾಗಿಲ್ಲದಿದ್ದರೆ ನಾನು ಮಲಗಿ ಸುಮ್ಮನಿದ್ದು ನಿದ್ರೆಮಾಡುತ್ತಿದ್ದೆನು;


ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.


ಇಬ್ಬರೂ ದೂಳಿನಲ್ಲಿ ಮಲಗುವರು, ಹುಳಗಳು ಅವರನ್ನು ಮುತ್ತಿಕೊಳ್ಳುವವು.


ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.


ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತಾಳು, ನಾನಾದರೆ ನಿನ್ನನ್ನು ಮರೆಯೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು