Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 25:2 - ಕನ್ನಡ ಸತ್ಯವೇದವು J.V. (BSI)

2 ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ದೇವರು ಮಹೋನ್ನತ ಪ್ರಭು; ಭಯಭಕ್ತಿಗೆ ಪಾತ್ರನು ಉನ್ನತಲೋಕದಲ್ಲಿ ಶಾಂತಿಸಮಾಧಾನವನು ಸ್ಥಾಪಿಸಿಹನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ದೇವರು ಸರ್ವಾಧಿಪತಿ. ಎಲ್ಲರೂ ತನ್ನಲ್ಲಿ ಭಯಭಕ್ತಿಯುಳ್ಳವರಾಗುವಂತೆ ಆತನು ಮಾಡುತ್ತಾನೆ. ಆತನು ತನ್ನ ಪರಲೋಕರಾಜ್ಯದಲ್ಲಿ ಸಮಾಧಾನವನ್ನು ನೆಲೆಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ; ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 25:2
27 ತಿಳಿವುಗಳ ಹೋಲಿಕೆ  

ಬೆಟ್ಟಗಳಿಗೂ ಬಂಡೆಗಳಿಗೂ - ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿರುವಾತನ ಮುಖಕ್ಕೂ ಯಜ್ಞದ ಕುರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;


ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಆತನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ನಿಷ್ಕರ್ಷೆಮಾಡಿದನು.


ಶಕ್ತನಾಗಿರುವ ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಎಲ್ಲಾ ಕಾಲಕ್ಕಿಂತ ಮೊದಲೂ [ಇದ್ದ ಹಾಗೆ] ಈಗಲೂ ಯಾವಾಗಲೂ ಇರಲಿ. ಆಮೆನ್.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಯೆಹೋವನು ಮನುಷ್ಯರ ಬಾಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ - ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು ಎಂದು ಹೇಳುತ್ತಾನೆ.


ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.


ಆಮೇಲೆ ಶೂಹ್ಯನಾದ ಬಿಲ್ದದನು ಹೀಗಂದನು -


ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವನು, ಸರ್ವಶಕ್ತನು ಉನ್ನತಾಕಾಶದಿಂದ ಕೊಡುವ ಬಾಧ್ಯತೆ ಯಾವದು?


ಇಗೋ, ದೇವರು ಮಹಾಶಕ್ತನಾಗಿದ್ದರೂ ಯಾರನ್ನೂ ತಿರಸ್ಕರಿಸುವದಿಲ್ಲ. ಆತನ ಬುದ್ಧಿಸಾಮರ್ಥ್ಯವು ಅಪಾರವಾಗಿದೆ.


ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತಕಾರ್ಯಗಳನ್ನು ನಡಿಸುವನು, ಆತನಂಥ ಉಪದೇಶಕನು ಯಾರು?


ಇಂಥ ಸರ್ವಶಕ್ತನನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ ಪರಿಪೂರ್ಣಧರ್ಮವನ್ನಾಗಲಿ ಕುಂದಿಸುವದಿಲ್ಲ.


ನೀನು ಸಕಲಕಾರ್ಯಗಳನ್ನು ನಡಿಸಬಲ್ಲಿಯೆಂತಲೂ ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ.


ನೀವು ದೇವರಿಗೆ - ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು