Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 26:10 - ಕನ್ನಡ ಸತ್ಯವೇದವು J.V. (BSI)

10 ಬೆಳಕುಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ ಸುತ್ತಲೂ ಮೇರೆಯನ್ನು ಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬೆಳಕು ಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ, ಸುತ್ತಲೂ ಮೇರೆಯನ್ನೂ ಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬೆಳಕು-ಕತ್ತಲು ಸಂಧಿಸುವ ಸ್ಥಾನದಲಿ ಮೇರೆಹಾಕಿದ್ದಾನೆ ಸಮುದ್ರದ ಸುತ್ತಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರು ಸಮುದ್ರದ ಮೇಲೆ ಬೆಳಕು ಮತ್ತು ಕತ್ತಲೆಗಳು ಸಂಧಿಸುವ ಸ್ಥಳದಲ್ಲಿ ಕ್ಷಿತಿಜವನ್ನು ಗಡಿರೇಖೆಯನ್ನಾಗಿ ಎಳೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬೆಳಕು ಮತ್ತು ಕತ್ತಲುಗಳ ಸಂಧಿಸುವ ಸ್ಥಾನದಲ್ಲಿ, ಸಮುದ್ರದ ಮೇಲೆ ಸುತ್ತಲೂ ವೃತ್ತ ಮೇರೆಯನ್ನು ಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 26:10
13 ತಿಳಿವುಗಳ ಹೋಲಿಕೆ  

ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಸಮುದ್ರಕ್ಕೆ ಎಲ್ಲೆಕಟ್ಟನ್ನು ನೇವಿುಸಿ ಭೂವಿುಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ


ನೀವು ನನಗೆ ಅಂಜುವದಿಲ್ಲವೋ, ನನ್ನೆದುರಿಗೆ ನಡುಗುವದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇವಿುಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂವಿುಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ.


ಭೂವಿುಯು ಇರುವ ತನಕ ಬಿತ್ತನೆಯೂ ಕೊಯಿಲೂ, ಚಳಿಯೂ ಸೆಕೆಯೂ, ಬೇಸಿಗೆಕಾಲವೂ ಹಿಮಕಾಲವೂ, ಹಗಲೂ ಇರುಳೂ ಇವುಗಳ ಕ್ರಮ ತಪ್ಪುವದೇ ಇಲ್ಲ ಅಂದುಕೊಂಡನು.


ಆಕಾಶಮಂಡಲದ ಸ್ತಂಭಗಳು ಆತನ ಗದರಿಕೆಯಿಂದ ಬೆರಗಾಗಿ ಕದಲುವವು.


ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು -


ಬೆಳಕಿನ ನಿವಾಸಕ್ಕೆ ಹೋಗುವ ದಾರಿ ಎಲ್ಲಿ? ಕತ್ತಲಿನ ಸ್ವಸ್ಥಳವು ಎಲ್ಲಿ?


ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರಕೊಂಡು ಹೋಗಿ ಅವುಗಳ ಮನೆಯ ಹಾದಿಗಳನ್ನು ಕಂಡುಕೊಳ್ಳಬಲ್ಲಿಯಾ?


ಬೆಳಕನ್ನು ಭಾಗಿಸುವದಕ್ಕೂ ಬಿಸಿಗಾಳಿಯನ್ನು ಭೂವಿುಯ ಮೇಲೆ ವಿಸ್ತರಿಸುವದಕ್ಕೂ ಮಾರ್ಗವೆಲ್ಲಿ?


ಆತನು ಸಾಗರದ ಮೇಲೆ ಚಕ್ರಾಕಾರವಾದ ಗೀಟನ್ನು ಎಳೆದು ಆಕಾಶಮಂಡಲವನ್ನು ಸ್ಥಾಪಿಸುವಾಗ ಅಲ್ಲಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು