Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 26:12 - ಕನ್ನಡ ಸತ್ಯವೇದವು J.V. (BSI)

12 ಆತನು ತನ್ನ ವಿವೇಕಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು; ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ತನ್ನ ವಿವೇಕ ಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು; ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಮುದ್ರವನು ಭೇದಿಸುತ್ತಾನೆ ಪರಾಕ್ರಮದಿಂದ ಘಟಸರ್ಪವನೂ ಹೊಡೆದು ಹಾಕುತ್ತಾನೆ ವಿವೇಕಶಕ್ತಿಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರ ಶಕ್ತಿಯು ಸಮುದ್ರವನ್ನು ಪ್ರಶಾಂತಗೊಳಿಸುವುದು. ದೇವರ ಶಕ್ತಿಯು ರಹಬನ ಸಹಾಯಕರನ್ನು ನಾಶಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರು ತಮ್ಮ ಶಕ್ತಿಯಿಂದ ಸಮುದ್ರವನ್ನು ಕಲಕಿದ್ದಾರೆ; ದೇವರು ತಮ್ಮ ಜ್ಞಾನದಿಂದ ಘಟಸರ್ಪನಾದ ರಹಾಬನನ್ನು ಹೊಡೆದುಹಾಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 26:12
16 ತಿಳಿವುಗಳ ಹೋಲಿಕೆ  

ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ; ಸೇನಾಧೀಶ್ವರನಾದ ಯೆಹೋವನೆಂಬದೇ ನನ್ನ ನಾಮಧೇಯ.


ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇವಿುಸುವಾತನೂ ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ -


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;


ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು, ಆಲೋಚನೆಯೂ ವಿವೇಕವೂ ಆತನವೇ.


ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವದಿಲ್ಲ; ಘಟಸರ್ಪದ ಸಹಾಯಕರು ಆತನಿಗೆ ಪಾದಾಕ್ರಾಂತರಾದರಲ್ಲಾ.


ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಸೇನಾಧೀಶ್ವರನಾದ ಯೆಹೋವನ [ನ್ಯಾಯನಿರ್ಣಯ] ದಿವಸವು ಗರ್ವದಿಂದ ಹೆಚ್ಚಿಕೊಂಡಿರುವ ಸಮಸ್ತಕ್ಕೂ ಸಂಭವಿಸುವದು; ಆಗ ಅದೆಲ್ಲಾ ತಗ್ಗುವದು.


ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿವಿುಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.


ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿದ್ದನು; ಆತನು ಸದಾಕಾಲವೂ ಅರಸನಾಗಿ ಕೂತಿರುವನು.


ಆಕಾಶಮಂಡಲದ ಸ್ತಂಭಗಳು ಆತನ ಗದರಿಕೆಯಿಂದ ಬೆರಗಾಗಿ ಕದಲುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು