Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 26:2 - ಕನ್ನಡ ಸತ್ಯವೇದವು J.V. (BSI)

2 ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! ಬಲಹೀನವಾದ ಕೈಗೆ ಚೆನ್ನಾಗಿ ನೆರವಾಗಿದ್ದಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! ಬಲಹೀನವಾದ ಕೈಗೆ ಮಹಾ ಸಹಾಯ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿಶ್ಯಕ್ತನಿಗೆ ನಿನ್ನಿಂದ ಮಹದುಪಕಾರವಾಯಿತು ದುರ್ಬಲವಾದ ಕೈಗಳಿಗೆ ಮಹಾ ನೆರವು ದೊರಕಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಿನ್ನಿಂದ ಬಲಹೀನನಿಗೆ ಎಷ್ಟೋ ಸಹಾಯವಾಯಿತು! ನೀನು ನನ್ನ ಬಲಹೀನವಾದ ತೋಳುಗಳನ್ನು ಮತ್ತೆ ಬಲಗೊಳಿಸಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಶಕ್ತಿ ಇಲ್ಲದವನಿಗೆ ನೀನು ಹೇಗೆ ಸಹಾಯ ಮಾಡಿದೆ? ತ್ರಾಣವಿಲ್ಲದ ಕೈಯನ್ನು ಹೇಗೆ ರಕ್ಷಿಸಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 26:2
15 ತಿಳಿವುಗಳ ಹೋಲಿಕೆ  

ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ.


ಹೌದು, ನೀವೇ ಮನುಷ್ಯರು; ಜ್ಞಾನವು ನಿಮ್ಮೊಡನೆಯೇ ಸಾಯುವದು, ನಿಜ.


ನೀತಿಯ ನುಡಿಗಳು ಎಷ್ಟೋ ಖಂಡಿತವಾಗಿವೆ, ಆದರೆ ನಿಮ್ಮ ಖಂಡನೆಯು ಖಂಡಿಸುವದೇನು?


ನನ್ನ ಬಲವು ಕಲ್ಲಿನ ಬಲವೋ? ನನ್ನ ಶರೀರವು ತಾಮ್ರದ್ದೋ?


ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯಮಾಡಿ - ಗಟ್ಟಿಯಾಗಿ ಕೂಗಿರಿ; ಅವನು ದೇವರಾಗಿರುತ್ತಾನಲ್ಲಾ! ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು ಎಂದು ಹೇಳಿದನು.


ಆತನು ಯಾವನ ಆಲೋಚನೆಯನ್ನು ಕೇಳಿದನು? ಯಾವನು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು? ಯಾವನು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕಮಾರ್ಗವನ್ನು ತೋರಿಸಿದನು?


ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ? ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವದೇಕೆ?


ನನ್ನಲ್ಲಿ ಏನೂ ಸಹಾಯವಿಲ್ಲವಲ್ಲಾ, ನನ್ನ ಸಾಮರ್ಥ್ಯವು ತೊಲಗಿಹೋಗಿದೆ.


ಆಗ ಯೋಬನು ಹೀಗೆ ಉತ್ತರಕೊಟ್ಟನು -


ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಎಷ್ಟೋ ಧಾರಾಳವಾಗಿ ಉಪದೇಶಿಸಿದ್ದೀ!


ಇಗೋ, ನೀವೆಲ್ಲರು ಸ್ವತಃ ನೋಡಿದ್ದೀರಿ; ಹೀಗಾದರೂ ಏಕೆ ಇಂಥ ವ್ಯರ್ಥವಾದ ಆಲೋಚನೆಗಳನ್ನು ಮಾಡಿಕೊಳ್ಳುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು