Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 26:3 - ಕನ್ನಡ ಸತ್ಯವೇದವು J.V. (BSI)

3 ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಎಷ್ಟೋ ಧಾರಾಳವಾಗಿ ಉಪದೇಶಿಸಿದ್ದೀ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಧಾರಾಳವಾಗಿ ಉಪದೇಶಿಸಿದ್ದಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮಂದಮತಿಯಾದವನಿಗೆ ಎಷ್ಟೋ ಬುದ್ಧಿ ಹೇಳಿರುವೆ ಸುಜ್ಞಾನವನ್ನು ಬಹಳವಾಗಿ ಬೋಧನೆಮಾಡಿರುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹೌದು, ಅಜ್ಞಾನಿಗೆ ಎಷ್ಟೋ ಒಳ್ಳೆಯ ಬುದ್ಧಿವಾದ ಮಾಡಿದೆ! ನೀನು ಎಷ್ಟು ಜ್ಞಾನಿ ಎಂಬುದನ್ನು ತೋರಿಸಿಕೊಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜ್ಞಾನವಿಲ್ಲದವನಿಗೆ ಏನು ಬುದ್ಧಿವಾದ ಹೇಳಿರುವೆ? ನೀನು ಯಾವ ವಿವೇಕದ ಮಾತುಗಳನ್ನು ಬಹಳವಾಗಿ ಪ್ರದರ್ಶಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 26:3
17 ತಿಳಿವುಗಳ ಹೋಲಿಕೆ  

ಯಾಕಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದೆನು.


ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವದಕ್ಕೂ ಸಭೆಯಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗಿಯದೆ


ಅಜ್ಞಾನದ ಮಾತುಗಳಿಂದ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?


ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು, ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.


ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.


ಆದರೆ ನೀವೆಲ್ಲರೂ ಮತ್ತೆ ವಿವಾದಕ್ಕೆ ಬನ್ನಿರಿ, ನಿಮ್ಮಲ್ಲಿ ಒಬ್ಬ ಜ್ಞಾನಿಯನ್ನಾದರೂ ಕಾಣೆ.


ನೀವು ಬಾಯಿಮುಚ್ಚಿ ಸುಮ್ಮನಾದರೆ ಎಷ್ಟೋ ಉತ್ತಮ! ಮೌನವೇ ನಿಮಗೆ ಜ್ಞಾನವು.


ನಿಮ್ಮ ಹಾಗೆ ನನಗೂ ಬುದ್ಧಿಯುಂಟು, ನಿಮಗಿಂತ ನಾನು ಕಡೆಯಲ್ಲ. ಇಂಥವು ಯಾರಿಗೆ ತಾನೇ ಗೊತ್ತಿಲ್ಲ.


ನನ್ನಲ್ಲಿ ಏನೂ ಸಹಾಯವಿಲ್ಲವಲ್ಲಾ, ನನ್ನ ಸಾಮರ್ಥ್ಯವು ತೊಲಗಿಹೋಗಿದೆ.


ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! ಬಲಹೀನವಾದ ಕೈಗೆ ಚೆನ್ನಾಗಿ ನೆರವಾಗಿದ್ದಿ!


ಯಾರಿಗೆ ಮಾತುಗಳನ್ನು ಕಲಿಸಿದ್ದೀ? ನಿನ್ನಿಂದ ಹೊರಟ ನುಡಿಗಳನ್ನು ಯಾವ ಆತ್ಮವು ಪ್ರೇರಿಸಿತು?


ಹೌದು, ನೀವೇ ಮನುಷ್ಯರು; ಜ್ಞಾನವು ನಿಮ್ಮೊಡನೆಯೇ ಸಾಯುವದು, ನಿಜ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು