Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:21 - ಕನ್ನಡ ಸತ್ಯವೇದವು J.V. (BSI)

21 ಮೂಡಣ ಗಾಳಿಯು ಕೊಚ್ಚುವದರಿಂದ ಅವನು ಹೋಗೇ ಹೋಗುವನು, ಅದು ಅವನನ್ನು ಬಡಿದು ಅವನ ಸ್ಥಳದೊಳಗಿಂದ ಹಾರಿಸಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮೂಡಣ ಗಾಳಿಯು ಕೊಚ್ಚಿಕೊಂಡು ಹೋಗುವುದರಿಂದ ಅವನು ಹಾರಿ ಹೋಗುವನು, ಅದು ಅವನನ್ನು ಬಡಿದು ಅವನ ಸ್ಥಳದಿಂದ ದೂರಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನು ತೂರಿಹೋಗದಿರನು ಮೂಡಣಗಾಳಿ ಬಡಿಯುವುದರಿಂದ ಅವನನ್ನು ಹೊಡೆದು ಹಾರಿಸಿಬಿಡುವುದು ಅವನಿರುವ ಜಾಗದಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪೂರ್ವದ ಗಾಳಿಯು ಅವನನ್ನು ಹೊತ್ತುಕೊಂಡು ಹೋಗುವುದರಿಂದ ಅವನು ಇಲ್ಲವಾಗುವನು. ಬಿರುಗಾಳಿಯು ಅವನನ್ನು ಮನೆಯೊಳಗಿಂದ ಹೊತ್ತುಕೊಂಡುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪೂರ್ವದಿಕ್ಕಿನ ಗಾಳಿ ದುಷ್ಟರನ್ನು ಬಡಿಯಲು, ಅವರು ಕೊಚ್ಚಿಕೊಂಡು ಹೋಗುವರು; ಅದು ಅವರನ್ನು ಅವರ ಸ್ಥಳದಿಂದ ಹಾರಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:21
14 ತಿಳಿವುಗಳ ಹೋಲಿಕೆ  

ಆತನು ದುಷ್ಟರ ಮೇಲೆ ಪಾಶಗಳನ್ನು ಸುರಿಸಲಿ. ಬೆಂಕಿ ಗಂಧಕ ಉರಿಗಾಳಿ ಇವುಗಳನ್ನು ಅವರ ಪಾನವಾಗಮಾಡಲಿ.


ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು.


ಇನ್ನೂ ಬೇಯದಿರುವಾಗಲೇ ಒಲೆಗಿಕ್ಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.


ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸರ್ತಿ? ಎಷ್ಟಾವರ್ತಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?


ಅವನು ತನ್ನ ಮನೆಗೆ ಪುನಃ ಸೇರುವದಿಲ್ಲ, ಇನ್ನು ಮೇಲೆ ಅವನ ನಿವಾಸವು ಅವನನ್ನು ತಿಳಿಯುವದಿಲ್ಲ.


ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಅದು ಧಡಮ್ಮನೆ ಕಡುಕೊಂಡು ಬಿತ್ತು.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವದು, ಅದರ ಒರತೆಯು ಒಣಗುವದು; [ಶತ್ರುವು] ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಗೊಂಬುವನು.


ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲುಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.


ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ ಲೋಕದಿಂದಲೇ ಅಟ್ಟಿಬಿಡುವರು.


ಅವನು ಸ್ವಪ್ನದಂತೆ ಹಾರಿಹೋಗಿ ಸಿಕ್ಕುವದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.


ನನ್ನನ್ನು ಬಿರುಗಾಳಿಗೆ ಎತ್ತಿ ತೂರಬಿಟ್ಟು ಅದರ ಆರ್ಭಟದಲ್ಲಿ ಮಾಯಮಾಡುತ್ತೀ.


ಇದಕ್ಕೆಲ್ಲಾ ನಿನ್ನ ಕೋಪರೌದ್ರಗಳೇ ಕಾರಣ. ನೀನು ನನ್ನನ್ನು ಎತ್ತಿ ಒಗೆದುಬಿಟ್ಟಿದ್ದೀಯಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು