ಯೋಬ 27:5 - ಕನ್ನಡ ಸತ್ಯವೇದವು J.V. (BSI)5 ನೀವು ನ್ಯಾಯವಂತರೆಂದು ನಾನು ಒಪ್ಪುವದು ದೂರವಾಗಿರಲಿ, ಸಾಯುವ ತನಕ ನನ್ನ ಯಥಾರ್ಥತ್ವದ ಹೆಸರನ್ನು ಕಳಕೊಳ್ಳೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ. ಸಾಯುವ ತನಕ ನನ್ನ ಯಥಾರ್ಥತ್ವವನ್ನು ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀವು ನ್ಯಾಯವಂತರೆಂದು ನಾನು ಒಪ್ಪಿದರೆ ನನಗಿರಲಿ ಧಿಕ್ಕಾರ! ನಾನು ಸತ್ಯತೆಯನ್ನು ಕಳೆದುಕೊಳ್ಳಲಾರೆ ಸಾಯುವ ತನಕ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀವು ನ್ಯಾಯವಂತರೆಂದು ನಾನು ಒಪ್ಪಿಕೊಳ್ಳುವುದಿಲ್ಲ. ನಾನು ನಿರಪರಾಧಿಯೆಂದು ನನ್ನ ಮರಣದ ದಿನದವರೆಗೂ ಹೇಳುತ್ತಲೇ ಇರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀವು ನ್ಯಾಯವಂತರೆಂದು ನಾನು ಒಪ್ಪುವುದಿಲ್ಲ; ನಾನು ಸಾಯುವ ತನಕ, ನನ್ನ ಪ್ರಾಮಾಣಿಕತ್ವವನ್ನು ಬಿಡುವುದಿಲ್ಲ. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು.