ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!