Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:9 - ಕನ್ನಡ ಸತ್ಯವೇದವು J.V. (BSI)

9 ಅವನಿಗೆ ಶ್ರಮೆಬರಲು ದೇವರು ಅವನ ಮೊರೆಯನ್ನು ಆಲೈಸುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನಿಗೆ ಶ್ರಮೆ ಬರಲು, ದೇವರು ಅವನ ಮೊರೆಯನ್ನು ಆಲೈಸುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನಿಗೆ ಕಷ್ಟದುಃಖ ಬಂದೊದಗಲು ದೇವರು ಆಲೈಸುವನೆ ಅವನ ಮೊರೆಯನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ದುಷ್ಟನು ಆಪತ್ತುಗಳಲ್ಲಿರುವಾಗ ದೇವರಿಗೆ ಮೊರೆಯಿಡುವನು; ಆದರೆ ದೇವರು ಅವನಿಗೆ ಕಿವಿಗೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಭಕ್ತಿಹೀನನಿಗೆ ಯಾತನೆ ಬಂದರೆ, ದೇವರು ಅವನ ಮೊರೆಯನ್ನು ಕೇಳುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:9
19 ತಿಳಿವುಗಳ ಹೋಲಿಕೆ  

ಇವರು ಉಪವಾಸ ಮಾಡುವಾಗ ಇವರ ಮೊರೆಯನ್ನು ಕೇಳೆನು; ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು; ಖಡ್ಗ ಕ್ಷಾಮ ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು ಎಂದು ಹೇಳಿದನು.


ನೀವು [ನನ್ನ ಕಡೆಗೆ] ಕೈಯೆತ್ತುವಾಗ ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು, ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರ ಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.


ಇಷ್ಟೆಲ್ಲಾ ನಡಿಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು; ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವನು.


ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.


ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂಬ ದುರಭಿಪ್ರಾಯಪಟ್ಟು ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.


ಆಗ ಸೇನಾಧೀಶ್ವರ ಯೆಹೋವನು ಇಂತೆಂದನು - ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವದಿಲ್ಲ;


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸೆನು, ಉಳಿಸೆನು; ಅವರು ಕೂಗಿಕೊಳ್ಳುವ ಮಹಾಶಬ್ದವು ನನ್ನ ಕಿವಿಗೆ ಬಿದ್ದರೂ ಲಾಲಿಸೆನು.


ಆದಕಾರಣ ಯೆಹೋವನೆಂಬ ನಾನು ಹೀಗನ್ನುತ್ತೇನೆ - ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.


ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ ಸ್ವಾವಿುಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.


ಭಕ್ತಿಹೀನರ ಪ್ರಾರ್ಥನೆಯನ್ನು ದೇವರು ಕೇಳುವದಿಲ್ಲ; ಯಾವನು ಭಕ್ತನಾಗಿದ್ದು ಆತನ ಚಿತ್ತದಂತೆ ನಡೆಯುತ್ತಾನೋ ಅವನ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.


ಮನೇಯಜಮಾನನು ಎದ್ದು ಕದಾ ಹಾಕಿಕೊಂಡ ಮೇಲೆ ನೀವು ಹೊರಗೆ ನಿಂತುಕೊಂಡು ಕದತಟ್ಟಿ - ಸ್ವಾಮೀ, ನಮಗೆ ತೆರೆಯಿರಿ ಎಂದು ಹೇಳುವದಕ್ಕೆ ತೊಡಗುವಾಗ ಅವನು - ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ ಅಂದಾನು.


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ನ್ಯಾಯವಿಚಾರಣೆಯಲ್ಲಿ ಅವನು ಅಪರಾಧಿಯೆಂದು ತೀರ್ಪುಹೊಂದಲಿ; ಅವನ ಪ್ರಾರ್ಥನೆಯೂ ಪಾಪವೆಂದು ಎಣಿಸಲ್ಪಡಲಿ.


ನೀವು ಹಿಂದಿರುಗಿ ಬಂದು ಯೆಹೋವನ ಮುಂದೆ ಗೋಳಾಡಿದಾಗ ಆತನು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ, ರಕ್ಷಿಸಲೂ ಇಲ್ಲ.


ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯಮಾಡುವೆನು.


ಗಾಳಿಯಿಂದ ಬಡಿಸಿಕೊಂಡು ಹೋಗುವ ದೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು