Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:13 - ಕನ್ನಡ ಸತ್ಯವೇದವು J.V. (BSI)

13 ಅದರ ಕ್ರಯವು ಯಾರಿಗೂ ಗೊತ್ತಿಲ್ಲ, ಜೀವಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದರ ಕ್ರಯವು ಯಾರಿಗೂ ಗೊತ್ತಿಲ್ಲ, ಭೂಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸುಜ್ಞಾನದ ಕ್ರಯ ಯಾರಿಗೂ ಗೊತ್ತಿಲ್ಲ ಜೀವಿತರಲ್ಲಿ ಅದನ್ನು ಕಂಡವರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜ್ಞಾನದ ಬೆಲೆಯು ಯಾರಿಗೂ ಗೊತ್ತಿಲ್ಲ. ಜನರು ನೆಲವನ್ನು ಅಗೆದು ಜ್ಞಾನವನ್ನು ಕಂಡುಕೊಳ್ಳಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಜ್ಞಾನದ ಮೌಲ್ಯ ಯಾರಿಗೂ ಗೊತ್ತಿಲ್ಲ; ಜೀವಿಸುವವರಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:13
18 ತಿಳಿವುಗಳ ಹೋಲಿಕೆ  

ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ಕೀಳಲ್ಪಟ್ಟಿದ್ದಾನೆ, ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?


ಸತ್ಯವನ್ನು ಎಂದರೆ ಜ್ಞಾನ ಸುಶಿಕ್ಷೆ ವಿವೇಕಗಳನ್ನು ಕೊಂಡುಕೋ; ಮಾರಿ ಬಿಡಬೇಡ.


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು; ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವದು ಲೇಸು.


ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.


ನೀನು ಉಸಿರಿದ ಧರ್ಮಶಾಸ್ತ್ರವು ಸಾವಿರಾರು ಚಿನ್ನಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ.


ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿ ಬಿಡುವನು; ನಿನ್ನನ್ನು ಹಿಡಿದು ನಿವಾಸದೊಳಗಿಂದ ಕಿತ್ತುಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. ಸೆಲಾ.


ಅವು ಬಂಗಾರಕ್ಕಿಂತಲೂ ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.


ನಾನು ಇನ್ನು ಜೀವಲೋಕದವನಾಗಿ ಯಾಹು ಯೆಹೋವನ ದರ್ಶನವನ್ನು ಹೊಂದೆನಲ್ಲಾ, ಇನ್ನು ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನಲ್ಲಾ.


ಭೂವಿುಯ ಕೆಳಗಣ ಸಾಗರವು - ನನ್ನಲ್ಲಿಲ್ಲ ಎನ್ನುವದು, ಸಮುದ್ರವು - ತನ್ನ ಹತ್ತಿರ ಸಿಕ್ಕದೆಂದು ಹೇಳುವದು.


ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನೆಂದು ದೃಢವಾಗಿ ನಂಬಿದ್ದೇನೆ.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು; ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.


ಏಲಾಮು ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು