Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:16 - ಕನ್ನಡ ಸತ್ಯವೇದವು J.V. (BSI)

16 ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳ ಪ್ರಮಾಣದಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತುಮಾಡುವದಕ್ಕಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತು ಮಾಡುವುದಕ್ಕೆ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಓಫೀರ್ ದೇಶದ ಅಪರಂಜಿಯಿಂದಲೂ ಅಮೂಲ್ಯ ಗೋಮೇಧಿಕ-ಇಂದ್ರನೀಲದಿಂದಲೂ ಸುಜ್ಞಾನದ ಮೌಲ್ಯವನ್ನು ಗೊತ್ತುಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಓಫೀರ್ ದೇಶದ ಬಂಗಾರದಿಂದಾಗಲಿ ಅಮೂಲ್ಯವಾದ ಗೋಮೇಧಕ ರತ್ನದಿಂದಾಗಲಿ ಇಂದ್ರನೀಲಮಣಿಗಳಿಂದಾಗಲಿ ಜ್ಞಾನವನ್ನು ಕೊಂಡುಕೊಳ್ಳಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಜ್ಞಾನವನ್ನು ಓಫಿರಿನ ಬಂಗಾರಕ್ಕೂ, ಅಮೂಲ್ಯವಾದ ಗೋಮೇಧಿಕಕ್ಕೂ, ಇಂದ್ರನೀಲಕ್ಕೂ ಬೆಲೆ ಕಟ್ಟಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:16
10 ತಿಳಿವುಗಳ ಹೋಲಿಕೆ  

ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದಿ; ಮಾಣಿಕ್ಯ ಪುಷ್ಯರಾಗ ಪಚ್ಚೆ ಪೀತರತ್ನ ಬೆರುಲ್ಲ ವೈಡೂರ್ಯ ನೀಲಕೆಂಪರಲು ಸ್ಫಟಿಕ ಈ ನವರತ್ನಗಳಿಂದ ಭೂಷಿತವಾಗಿದ್ದಿ; ನಿನ್ನಲ್ಲಿನ [ಈ ರತ್ನಗಳ] ಗೂಡುಗಳೂ ಮನೆಗಳೂ ಸುವರ್ಣ ರಚಿತವಾಗಿದ್ದವು; ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ಮನುಷ್ಯರನ್ನು ಅಪರಂಜಿಗಿಂತಲೂ ಮಾನವರನ್ನು ಓಫೀರಿನ ಬಂಗಾರಕ್ಕಿಂತಲೂ ಅಪರೂಪವಾಗುವಂತೆ ಮಾಡುವೆನು.


ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫಿರ್ ದೇಶದ ಬಂಗಾರದ ಆಭರಣಗಳಿಂದ ಭೂಷಿತಳಾಗಿ ನಿನ್ನ ಬಲಭಾಗದಲ್ಲಿ ನಿಂತಿರುವಳು.


ಮೂರು ಸಾವಿರ ತಲಾಂತು ಒಫೀರ್ ದೇಶದ ಬಂಗಾರವನ್ನೂ ಏಳು ಸಾವಿರ ತಲಾಂತು ಚೊಕ್ಕ ಬೆಳ್ಳಿಯನ್ನೂ ಕೊಡುತ್ತೇನೆ.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ ಬೆರುಲ್ಲ ವೈಡೂರ್ಯಗಳನ್ನೂ ಚಿನ್ನದ ಜವೆಯ ಕಲ್ಲಿಗಳಲ್ಲಿ ಸೇರಿಸಬೇಕು.


ಚೊಕ್ಕ ಬಂಗಾರವನ್ನು ಕೊಟ್ಟು ಅದನ್ನು ಕೊಂಡುಕೊಳ್ಳುವದು ಅಸಾಧ್ಯ, ಅದರ ಬೆಲೆಗೆ ಬೆಳ್ಳಿಯನ್ನು ತೂಗುವದು ಅಶಕ್ಯ.


ಹೊನ್ನಾಗಲಿ ಗಾಜಾಗಲಿ ಅದಕ್ಕೆ ಸಮವಾದೀತೇ? ಚಿನ್ನದ ಆಭರಣಗಳನ್ನು ಅದಕ್ಕೆ ಬದಲು ಕೊಡುವದು ಸಾಧ್ಯವೋ?


ಅವನ ಕೈಗಳು ಪೀತರತ್ನಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.


ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.


ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು