Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:26 - ಕನ್ನಡ ಸತ್ಯವೇದವು J.V. (BSI)

26 ಮಳೆಗೆ ಕಟ್ಟಳೆಯನ್ನೂ ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಮಳೆಗೆ ಕಟ್ಟಳೆಯನು ವಿಧಿಸಿದಾಗ ಗುಡುಗು ಮಿಂಚಿಗೆ ಮಾರ್ಗವನ್ನೇರ್ಪಡಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಮಳೆಯನ್ನೂ ಗುಡುಗುಸಿಡಿಲುಗಳ ಮಳೆಯನ್ನೂ ಎಲ್ಲಿಗೆ ಕಳುಹಿಸಬೇಕೆಂದು ನಿರ್ಧರಿಸಿದಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:26
20 ತಿಳಿವುಗಳ ಹೋಲಿಕೆ  

ನಿರ್ಜನಪ್ರದೇಶದಲ್ಲಿಯೂ ಮನುಷ್ಯರೇ ಇಲ್ಲದ ಕಾಡಿನಲ್ಲಿಯೂ ಮಳೆಯನ್ನು ಸುರಿಸಿ


ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ ತನ್ನ ಸಿಡಿಲನ್ನು ಭೂವಿುಯ ಅಂಚುಗಳವರೆಗೂ ಬಿಡುವನು.


ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ವಿುಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.


ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ ನಿಮಗೆ ಮಳೆಯನ್ನು ತಡೆದೆನು; ಒಂದು ಊರಿನ ಮೇಲೆ ಮಳೆಯಾಗುವಂತೆಯೂ ಇನ್ನೊಂದು ಊರಿನ ಮೇಲೆ ಮಳೆಯಾಗದಂತೆಯೂ ಮಾಡಿದೆನು; ಒಬ್ಬನ ಹೊಲದಲ್ಲಿ ಮಳೆಯಾಯಿತು, ಮಳೆಯಾಗದ ಹೊಲವು ಬಾಡಿಹೋಯಿತು.


ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.


ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳೂ ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯೂ


ವೃಷ್ಟಿಯ ಪ್ರವಾಹಕ್ಕೆ ಕಾಲುವೆಯನ್ನೂ ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಯಾರು ಕಡಿದರು?


ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ ತನ್ನ ವಿುಂಚಿನ ಮೇಘಮಂಡಲವನ್ನು ಹರಡುವನು.


ಕೈತುಂಬಾ ಸಿಡಿಲನ್ನು ಹಿಡಿದು ನೀನು ವೈರಿಯನ್ನು ಹೊಡೆ ಎಂದು ಅದನ್ನು ಬಿಡುವನು.


ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರುಷಗಳು ಅಸಂಖ್ಯಾತವಾಗಿವೆ.


ಜ್ಞಾನವನ್ನು ಕಂಡು ಲಕ್ಷಿಸಿದನು, ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆ ಮಾಡಿದನು.


ಆತನು ಹಿಮಕ್ಕೂ ಹದಮಳೆಗೂ ತನ್ನ ಶಕ್ತಿಯ ದೊಡ್ಡ ಮಳೆಗೂ ಭೂವಿುಯ ಮೇಲೆ ಬೀಳು ಎಂದು ಅಪ್ಪಣೆಮಾಡುವನು.


ಹಾಳುಬೀಳಾದ ಭೂವಿುಯನ್ನು ತೃಪ್ತಿಪಡಿಸಿ ಹಸಿಯ ಹುಲ್ಲನ್ನು ಬೆಳೆಯಿಸಬೇಕೆಂದು


ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; ಆತನ ಪುರಾತನ ಕಾರ್ಯಗಳಲ್ಲಿ ನಾನೇ ಪ್ರಥಮ.


ನೀರಿನ ಹನಿಗಳನ್ನು ಎಳೆದುಕೊಳ್ಳುವನು, ಅವು ತಿಳಿಮಳೆಯಾಗಿ ಆತನ ಮಂಜಿನಿಂದ ಉದುರುವವು.


ಹಾ, ಮೇಘಗಳ ಹಬ್ಬುಗೆಯನ್ನೂ ಆತನ ಗುಡಾರದಲ್ಲಿನ ಗರ್ಜನೆಗಳನ್ನೂ ಗ್ರಹಿಸಬಹುದೇ?


ಗುಡುಗುಟ್ಟುವ ಆತನ ಧ್ವನಿಗೆ ಕಿವಿಗೊಡಿರಿ, ಆತನ ಬಾಯಿಂದ ಹೊರಡುವ ಮೊಳಗನ್ನು ಕೇಳಿರಿ!


ಸಿಡಿಲಿನ ತರುವಾಯ ಗರ್ಜನೆಯುಂಟಾಗುವದು, ಆತನು ತನ್ನ ಮಹಿಮೆಯ ಶಬ್ದದಿಂದ ಗುಡುಗುವನು. ಈ ಶಬ್ದವು ಕೇಳಿಸಿದ ಮೇಲೆಯೂ ಆತನು ಸಿಡಿಲುಗಳನ್ನು ತಡೆಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು