ಯೋಬ 28:4 - ಕನ್ನಡ ಸತ್ಯವೇದವು J.V. (BSI)4 ಗಣಿಯನ್ನು ತೋಡಿ ತೋಡಿ ಜನನಿವಾಸಗಳಿಗೆ ದೂರವಾಗಿ [ಮೇಲೆ] ನಡೆದಾಡುವವರಿಗೆ ಮರೆತುಹೋಗಿ ನರಲೋಕಕ್ಕೆ ಅನ್ಯರಾಗಿ ಅತ್ತಿತ್ತ ನೇತಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಗಣಿಯನ್ನು ತೋಡಿ ತೋಡಿ ಭೂಮಿಯೊಳಗೆ ಬಹುದೂರ ಜನರು ವಾಸಸ್ಥಳಗಳಿಂದ ದೂರವಾಗುವರು, ಭೂಮಿಯ ಮೇಲೆ ನಡೆದಾಡುವವರಿಗೆ ಕಾಣದೆ, ನರಲೋಕಕ್ಕೆ ಅನ್ಯರಾಗಿ ಅತ್ತಿತ್ತ ಅಲೆದಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಗಣಿಯನ್ನು ತೋಡಿತೋಡಿ ಜನನಿವಾಸಿಗಳಿಗೆ ದೂರವಾಗಿ ಮೇಲ್ಗಡೆ ನಡೆದಾಡುವವರನ್ನು ಮರೆತುಹೋಗಿ ಅತ್ತಿತ್ತ ಅಲೆದಾಡುತ್ತಾರೆ ನರಲೋಕಕ್ಕೆ ಅನ್ಯರಾಗಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಲೋಹದ ಅದುರುಗಳು ಸಿಕ್ಕುವ ಸ್ಥಳಗಳಲ್ಲಿ ಅಗೆಯುತ್ತಾ ಹೋಗುವರು; ಜನರು ವಾಸವಾಗಿರುವುದಕ್ಕಿಂತ ಆಳವಾದ ಸ್ಥಳಕ್ಕೆ ಇಳಿದುಹೋಗುವರು; ಆಳವಾದ ಆ ಸ್ಥಳಗಳನ್ನು ಜನರು ಹಿಂದೆಂದೂ ನೋಡಿಯೇ ಇಲ್ಲ. ಅವರು ಹಗ್ಗಗಳನ್ನು ಕಟ್ಟಿಕೊಂಡು ಜನರಿಗೆ ಬಹುದೂರವಾದ ಆಳವಾದ ಗಣಿಗಳಲ್ಲಿ ನೇತಾಡುತ್ತಾ ದುಡಿಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಜನ ನಿವಾಸದಿಂದ ದೂರವಾಗಿ ಗಣಿ ತೋಡಿ, ಮನುಷ್ಯರು ನಡೆದಾಡದ ಸ್ಥಳಗಳಲ್ಲಿ ಇತರರಿಂದ ಪ್ರತ್ಯೇಕವಾಗಿ ಕೆಲಸ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |