Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:6 - ಕನ್ನಡ ಸತ್ಯವೇದವು J.V. (BSI)

6 ಅದರ ಕಲ್ಲುಗಳಲ್ಲಿ ಇಂದ್ರನೀಲ ಮಣಿಗಳು ಸಿಕ್ಕುವವು, ಅದರಲ್ಲಿ ಚಿನ್ನದ ಪುಡಿಯೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದರ ಕಲ್ಲುಗಳಲ್ಲಿ ಇಂದ್ರನೀಲ ಮಣಿಗಳು ಸಿಕ್ಕುವವು, ಅದರಲ್ಲಿ ಚಿನ್ನದ ಪುಡಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀಲಿರತ್ನಗಳು ಸಿಗುತ್ತವೆ ಭುವಿಯ ಕಲ್ಲುಗಳಲಿ ಚಿನ್ನಚಿಗುರು ದೊರಕುತ್ತದೆ ಅದರ ಧೂಳಿನಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಭೂಮಿಯ ಕೆಳಭಾಗದಲ್ಲಿ ಇಂದ್ರನೀಲಮಣಿಗಳೂ ಚಿನ್ನದ ಅದಿರೂ ಸಿಕ್ಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಭೂಮಿಯ ಬಂಡೆಗಳು ಇಂದ್ರನೀಲಗಳು ಸಿಗುತ್ತವೆ; ಅದರ ಧೂಳಿನಲ್ಲಿ ಬಂಗಾರದ ಗಟ್ಟಿಗಳು ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:6
7 ತಿಳಿವುಗಳ ಹೋಲಿಕೆ  

ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳ ಪ್ರಮಾಣದಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತುಮಾಡುವದಕ್ಕಾಗದು.


ಅವರಿಗೆ ಇಸ್ರಾಯೇಲ್ಯರ ದೇವರ ದರ್ಶನವಾಯಿತು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.


ಪಟ್ಟಣದ ಪ್ರಾಕಾರದ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ವಜ್ರ, ಎರಡನೇದು ವೈಡೂರ್ಯ, ಮೂರನೇದು ಪಚ್ಚೆ,


ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.


ಅವನ ಕೈಗಳು ಪೀತರತ್ನಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.


ಭೂವಿುಯು ಅನ್ನವನ್ನು ಕೊಡುವದು, ಅದರ ಕೆಳಭಾಗವೋ ಬೆಂಕಿಬಿದ್ದಂತೆ ಹಾಳಾಗಿರುವದು.


ಆ ದಾರಿಯು ಯಾವ ಹದ್ದಿಗೂ ತಿಳಿಯದು, ಗಿಡಗದ ಕಣ್ಣಿಗೂ ಬಿದ್ದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು