Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:25 - ಕನ್ನಡ ಸತ್ಯವೇದವು J.V. (BSI)

25 ನಾನು ಅವರಿಗೆ ತಕ್ಕ ಮಾರ್ಗವನ್ನು ಆರಿಸಿಕೊಟ್ಟು ತನ್ನ ಸೈನ್ಯಗಳ ಮಧ್ಯದಲ್ಲಿ ಮಂಡಿಸಿರುವ ರಾಜನಂತೆಯೂ ದುಃಖಿತರನ್ನು ಸಂತೈಸುವವನಂತೆಯೂ ಮುಖಂಡನಾಗಿ ಕೂಡ್ರುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನು ಅವರಿಗೆ ತಕ್ಕ ಮಾರ್ಗವನ್ನು ಆರಿಸಿಕೊಟ್ಟು, ತನ್ನ ಸೈನ್ಯಗಳ ಮಧ್ಯದಲ್ಲಿ ಕುಳಿತಿರುವ ರಾಜನಂತೆಯೂ, ದುಃಖಿತರನ್ನು ಸಂತೈಸುವ ಮುಖಂಡನಾಗಿ ಆಸೀನನಾಗಿದ್ದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಾನು ಅವರಿಗೆ ಮಾರ್ಗದರ್ಶಕನಾಗಿದ್ದೆ ಸೇನೆಗಳ ಮಧ್ಯೆ ರಾಜನಂತೆ ಮಂಡಿಸಿದ್ದೆ ದುಃಖಿತರನು ಸುಧಾರಕನಂತೆ ಸಂತೈಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ನಾಯಕನಾಗಿದ್ದರೂ ಅವರೊಂದಿಗೇ ಇರುತ್ತಿದ್ದೆನು; ಪಾಳೆಯದಲ್ಲಿ ಸೈನ್ಯಗಳೊಂದಿಗಿರುವ ರಾಜನಂತೆ ನಾನು ದುಃಖಿತರನ್ನು ಆದರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಾನು ಅವರ ಪ್ರಧಾನನಾಗಿ ಕೂತು ಸೈನ್ಯಗಳ ನಡುವೆ ಅರಸನಂತೆ ಆಸೀನನಾಗಿದ್ದೆನು. ನಾನು ದುಃಖಿಸುವವರನ್ನು ಸಂತೈಸುವವನಾಗಿಯೂ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:25
16 ತಿಳಿವುಗಳ ಹೋಲಿಕೆ  

ಅವರು - ಆದದರಿಂದಲೇ ಈಗ ತಿರಿಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವಿಯಾದರೆ ಗಿಲ್ಯಾದಿನವರಿಗೆಲ್ಲಾ ನೀನೇ ಶಿರಸ್ಸಾಗಿರುವಿ ಎಂದು ಹೇಳಿದರು.


ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು; ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು; ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಎಂದು ಹೇಳಿದನು.


ಪ್ರಭುವಿನಂತೆ ಆತನ ಸಾನ್ನಿಧ್ಯದಲ್ಲಿ ಪ್ರವೇಶಿಸಿ ನನ್ನ ಹೆಜ್ಜೆಗಳ ಲೆಕ್ಕವನ್ನು ಆತನಿಗೆ ಅರಿಕೆಮಾಡಿಕೊಳ್ಳುತ್ತಿದ್ದೆನು.


ಅವನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಐನೂರು ಜೋಡಿ ಎತ್ತುಗಳೂ ಐನೂರು ಹೆಣ್ಣು ಕತ್ತೆಗಳೂ ಅನೇಕಾನೇಕ ಸೇವಕರೂ ಇದ್ದದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವಾಸ್ತ್ಯವುಳ್ಳವನಾಗಿದ್ದನು.


ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ; ಹಿಂದಿನ ದಿವಸಗಳಲ್ಲಿ ಅಂದರೆ ಸೌಲನ ಆಳಿಕೆಯಲ್ಲಿ ಇಸ್ರಾಯೇಲ್ಯರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು - ನೀನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನಷ್ಟೆ ಅಂದರು.


ಇಸ್ರಾಯೇಲ್ಯರ ಅಧಿಪತಿಗಳು ಕುಲಗಳವರೊಡನೆ ಒಟ್ಟಾಗಿ ಕೂಡಿದಾಗ [ಯೆಹೋವನು] ತಾನೇ ಯೆಶುರೂನಿನಲ್ಲಿ ಅರಸನಾದನು.


ನಾನೂ ಬಾಯಿಂದ ನಿಮ್ಮನ್ನು ಧೈರ್ಯಗೊಳಿಸಿ ತುಟಿಗಳ ಆದರಣೆಯಿಂದ [ನಿಮ್ಮ ದುಃಖವನ್ನು] ಶಮನಪಡಿಸಬಹುದಾಗಿತ್ತು.


ನಾನು ಅವರನ್ನು ನೋಡಿ ನಗಲು ಅವರು ಧೈರ್ಯಗೆಟ್ಟರು, ನನ್ನ ಮುಖಕಾಂತಿಯನ್ನೋ ಅವರು ಎಂದೂ ಕುಂದಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು