Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:17 - ಕನ್ನಡ ಸತ್ಯವೇದವು J.V. (BSI)

17 ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವದು, ದಣಿದವರು ದಣುವಾರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವುದು, ದಣಿದವರು ದಣಿವಾರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದಣಿದವರಿಗೆ ದೊರಕುವುದು ಆ ಕೂಪದಲಿ ವಿಶ್ರಾಂತಿ ಅಣಗುವುದಲ್ಲಿ ದುರುಳರು ಕೊಡುವ ಹಾವಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದುಷ್ಟರು ಸಮಾಧಿಯಲ್ಲಿರುವಾಗ ಕೇಡುಮಾಡುವುದನ್ನು ನಿಲ್ಲಿಸುವರು. ಆಯಾಸಗೊಂಡಿರುವ ಜನರು ಸಮಾಧಿಯಲ್ಲಿ ವಿಶ್ರಾಂತಿಯನ್ನು ಕಂಡುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಲ್ಲಿ ದುಷ್ಟರು ತೊಂದರೆ ಕೊಡುವುದು ಇರುವುದಿಲ್ಲ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:17
16 ತಿಳಿವುಗಳ ಹೋಲಿಕೆ  

ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? ನಾವು ಜೊತೆಯಾಗಿ ದೂಳಿಗೆ ಸೇರೇವೋ?


ಆದದರಿಂದ ನಾವು ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸಪಡೋಣ; ನಮ್ಮಲ್ಲಿ ಒಬ್ಬರಾದರೂ ಅವರ ಅವಿಧೇಯತ್ವವನ್ನು ಅನುಸರಿಸುವವರಾಗಬಾರದು.


ಆದದರಿಂದ ದೇವರ ಜನರು ಅನುಭವಿಸುವದಕ್ಕಿರುವ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.


ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು ನಿನ್ನ ಕೋಪವು ಇಳಿಯುವ ಪರ್ಯಂತ ನನ್ನನ್ನು ಮರೆಮಾಡಿ ನನಗೆ ಅವಧಿಯನ್ನು ಗೊತ್ತುಮಾಡಿ [ಕಡೆಯಲ್ಲಿ] ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು!


ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ - ದೇಹವನ್ನು ಕೊಂದು ಅದಕ್ಕಿಂತ ಹೆಚ್ಚಿನದೇನೂ ಮಾಡಲಾರದವರಿಗೆ ಹೆದರಬೇಡಿರಿ.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಆ ನೀತಿವಂತನು ಅವರ ನಡುವೆ ಇದ್ದುಕೊಂಡು ಅವರ ಅನ್ಯಾಯಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿವಿುತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ಕರಕರೆಗೊಂಡನು.


ಆತನು ನಿನ್ನ ಕೂಡ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಗೆ ಒಪ್ಪಿಸುವನು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ; ಆತನು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವನು ಎಂದು ಹೇಳಿದನು.


ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದ ಹೂಳಿಟ್ಟ ಪಿಂಡದಂತೆಯಾಗಲಿ ಬೆಳಕನ್ನೇ ಕಾಣದೆ ಸತ್ತ ಕೂಸುಗಳಂತೆಯಾಗಲಿ ಆಗಿದ್ದರೆ ಜನ್ಮವಿಲ್ಲದೆ ಇರುತ್ತಿದ್ದೆನು.


ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ ಗುಂಪುಗುಂಪಾಗಿ ವಿಶ್ರವಿುಸಿಕೊಳ್ಳುವರು.


ಇದನ್ನು ನೋಡಿ ಇನ್ನೂ ಜೀವದಿಂದಿರುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು;


ಅವರು ಸತ್ತಾಗಲೇ ಅವರ ಪ್ರೀತಿಯೂ ಹಗೆಯೂ ಹೊಟ್ಟೇಕಿಚ್ಚೂ ಅಳಿದುಹೋದವು; ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು