Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:21 - ಕನ್ನಡ ಸತ್ಯವೇದವು J.V. (BSI)

21 ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಎಷ್ಟು ಅಗೆದರೂ ದೊರಕದು ಅಂಥವರಿಗೆ ನಿಧಿನಿಕ್ಷೇಪ ಅದಕ್ಕಿಂತ ಮಿಗಿಲಾಗಿ ಬಯಸಿದರೂ ಬಾರದು ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವನು ಸಾಯಲು ಬಯಸಿದರೂ ಸಾವು ಬರುವುದಿಲ್ಲ. ಹೂಳಿಟ್ಟಿರುವ ಭಂಡಾರವನ್ನು ಹುಡುಕುವುದಕ್ಕಿಂತಲೂ ಹೆಚ್ಚಾಗಿ ವ್ಯಥೆಯುಳ್ಳವನು ಸಾವನ್ನೇ ಹುಡುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ನಿಕ್ಷೇಪಕ್ಕಾಗಿ ಅಗಿಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:21
13 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವದಿಲ್ಲ; ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿಹೋಗುವದು.


ಅದನ್ನು ಬೆಳ್ಳಿಯಂತೆಯೂ ನಿಕ್ಷೇಪದಂತೆಯೂ ಹುಡುಕು;


ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.


ಈಗ, ಯೆಹೋವನೇ, ನನ್ನ ಪ್ರಾಣವನ್ನು ತೆಗೆ; ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ವಿಜ್ಞಾಪಿಸಿಕೊಂಡನು.


ತರುವಾಯ ತಾನೊಬ್ಬನಾಗಿ ಅರಣ್ಯದೊಳಗೆ ಒಂದು ದಿವಸದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀಗಿಡದ ಕೆಳಗೆ ಕೂತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು - ಯೆಹೋವನೇ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡು; ನಾನು ನನ್ನ ಪಿತೃಗಳಿಗಿಂತ ಉತ್ತಮನಲ್ಲ ಎಂದು ದೇವರನ್ನು ಪ್ರಾರ್ಥಿಸಿ


ನೀನು ಹೀಗೆ ಮಾಡುವದಕ್ಕಿಂತಲೂ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರ; ನನಗಾಗುವ ದುರವಸ್ಥೆಯನ್ನು ನಾನು ನೋಡಲಾರೆನು ಅಂದನು.


ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ.


ನಾನು ಯಾವಾವ ಸ್ಥಳಗಳಿಗೆ ಈ ದುರ್ವಂಶದವರನ್ನು ಅಟ್ಟಿಬಿಟ್ಟಿದ್ದೇನೋ ಅಲ್ಲೆಲ್ಲಾ ಉಳಿದವರೆಲ್ಲರೂ ಜೀವಿಸುವದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು. ಇದು ಯೆಹೋವನ ನುಡಿ.


ಅಯ್ಯೋ, ನನ್ನ ವಿಜ್ಞಾಪನೆಯು ನೆರವೇರುವದಿಲ್ಲವೇ, ನಾನು ಬಯಸುವದನ್ನು ದೇವರು ಕೊಡುವದಿಲ್ಲವೇ?


ಆತನು ದಯಮಾಡಿ ತನ್ನ ಕೈ ಜಾಡಿಸಿ ನನ್ನನ್ನು ಜಜ್ಜಿ ಸಂಹರಿಸಿದರೆ


ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವದಕ್ಕಿಂತಲೂ ಉಸಿರುಕಟ್ಟಿ ಸಾಯುವದೇ ಲೇಸೆಂದು ಇಚ್ಫೈಸುತ್ತದೆ.


ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬದೇ ಅವರ ಆಶೆ.


ಇದನ್ನು ನೋಡಿ ಇನ್ನೂ ಜೀವದಿಂದಿರುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು