Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:1 - ಕನ್ನಡ ಸತ್ಯವೇದವು J.V. (BSI)

1 ಈಗಲಾದರೋ ನನಗಿಂತ ಚಿಕ್ಕ ವಯಸ್ಸಿನವರು ನನ್ನನ್ನು ಪರಿಹಾಸ್ಯ ಮಾಡುತ್ತಾರೆ; ಇವರ ತಂದೆಗಳನ್ನು ನನ್ನ ಮಂದೆನಾಯಿಗಳೊಡನೆಯೂ ಇರತಕ್ಕವರಲ್ಲವೆಂದು ತಳ್ಳಿಬಿಟ್ಟಿದ್ದೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈಗಲಾದರೋ ನನಗಿಂತ ಚಿಕ್ಕವಯಸ್ಸಿನವರು ನನ್ನನ್ನು ಪರಿಹಾಸ್ಯಮಾಡುತ್ತಾರೆ; ಇವರ ಹೆತ್ತವರನ್ನು ನನ್ನ ಕುರಿ ಮಂದೆಯ ನಾಯಿಗಳ ಸಂಗಡ ಸೇರಿಸುವುದಕ್ಕೂ ಉದಾಸಿನ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಈಗಲಾದರೊ ನನಗಿಂತ ಚಿಕ್ಕವರು ನನ್ನನ್ನು ಪರಿಹಾಸ್ಯಮಾಡುತ್ತಾರೆ. ಇವರ ಹೆತ್ತವರು ನನ್ನ ಮುಂದೆ. ನಾಯಿಗಳೊಡನೆ ಇರಲೂ ಅಯೋಗ್ಯರು ಎಂದೆಣಿಸಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಈಗಲಾದರೋ, ನನಗಿಂತ ಚಿಕ್ಕವರೂ ನನ್ನನ್ನು ಗೇಲಿ ಮಾಡುತ್ತಾರೆ. ಅವರ ತಂದೆಗಳನ್ನು ನನ್ನ ಕುರಿಕಾಯುವ ನಾಯಿಗಳಿಗೂ ಯೋಗ್ಯರಲ್ಲವೆಂದು ತಳ್ಳಿಬಿಟ್ಟಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು, ನನ್ನನ್ನು ನೋಡಿ ಪರಿಹಾಸ್ಯ ಮಾಡುತ್ತಾರೆ. ಇವರ ಪಿತೃಗಳನ್ನು ನನ್ನ ಕುರಿಮಂದೆಯ ನಾಯಿಗಳೊಡನೆ ಇರಲೂ ಅಯೋಗ್ಯರು ಎಂದೆಣಿಸಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:1
17 ತಿಳಿವುಗಳ ಹೋಲಿಕೆ  

ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದಾನೆ.


ಜನರು ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು ಹಾಸ್ಯಮಾಡಿ - ಅವನು ಮತ್ತೊಬ್ಬರನ್ನು ರಕ್ಷಿಸಿದನು; ಅವನು ದೇವರಾರಿಸಿಕೊಂಡ ಕ್ರಿಸ್ತನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.


ಊರುಬಾಗಲಲ್ಲಿ ಕೂತುಕೊಳ್ಳುವವರ ಆಡಿಕೆಗೆ ಗುರಿಯಾಗಿದ್ದೇನೆ. ಕುಡಿಕರು ನನ್ನ ವಿಷಯ ಹಾಡಿ ಗೇಲಿಮಾಡುತ್ತಾರೆ.


ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ ಆ ಊರಿನ ಹುಡುಗರು ಹೊರಗೆ ಬಂದು - ಬೋಳಮಂಡೆಯವನೇ, ಏರು; ಬೋಳಮಂಡೆಯವನೇ, ಏರು ಎಂದು ಕೂಗಿ ಅವನನ್ನು ಪರಿಹಾಸ್ಯಮಾಡಿದರು.


ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಸೋಮಾರಿಗಳಾದ ಹೊಟ್ಟೇಬಾಕರೂ ಆಗಿದ್ದಾರೆಂದು ಅವರಲ್ಲಿಯೇ ಹುಟ್ಟಿದ ಒಬ್ಬ ಪ್ರವಾದಿಯು ಹೇಳಿದನು. ಈ ಸಾಕ್ಷಿಯು ನಿಜವೇ.


ಯೆಹೂದ್ಯರು ಹೊಟ್ಟೇಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪೋಕರನ್ನು ಕರೆದುಕೊಂಡು ಬಂದು ಗುಂಪುಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಸೀಲರನ್ನು ಪಟ್ಟಣದ ಸಭೆಗೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.


ತೂಗಹಾಕಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ - ನೀನು ಬರಬೇಕಾದ ಕ್ರಿಸ್ತನಲ್ಲವೇ, ನಿನ್ನನ್ನು ರಕ್ಷಿಸಿಕೋ, ನಮ್ಮನ್ನೂ ರಕ್ಷಿಸು ಎಂದು ಹೇಳಿದ್ದಕ್ಕೆ


ಆದರೆ ಅವರು - ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು ಎಂದು ಒಟ್ಟಾಗಿ ಕೂಗಿದರು.


ಅವರಿಗೆ - ಈ ಮನುಷ್ಯನು ಪ್ರಜೆಗಳನ್ನು ತಿರುಗಿಬೀಳುವಂತೆ ಮಾಡುವವನು ಎಂದು ಇವನನ್ನು ನನ್ನ ಬಳಿಗೆ ತಂದಿರಲ್ಲಾ; ನೀವು ಇವನ ಮೇಲೆ ತಂದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆಮಾಡಿದರೂ ಇವನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.


ಆಮೇಲೆ ಕೆಲವರು ಆತನನ್ನು ಉಗುಳಿ ಆತನ ಮುಖಕ್ಕೆ ಮುಸುಕುಹಾಕಿ ಗುದ್ದಿ - ಪ್ರವಾದನೆ ಹೇಳು ಅನ್ನುತ್ತಿದ್ದರು. ಮತ್ತು ಓಲೇಕಾರರು ಆತನ ಕೆನ್ನೆಗೆ ಏಟು ಹಾಕುತ್ತಾ ತಮ್ಮ ವಶಕ್ಕೆ ತೆಗೆದುಕೊಂಡರು.


ಪ್ರಜೆಗಳು ಪರಸ್ಪರ ವಿರೋಧಿಗಳಾಗಿ ಒಬ್ಬರನ್ನೊಬ್ಬರು ಹಿಂಸಿಸುವರು; ಹುಡುಗನು ಮುದುಕನ ಮೇಲೆಯೂ ನೀಚನು ಘನವಂತನ ಮೇಲೆಯೂ ಸೊಕ್ಕೇರಿ ನಡೆಯುವರು.


ಅವರ ಕೈಬಲದಿಂದ ನನಗೆ ಏನಾದೀತು? ಅವರ ಪುಷ್ಟಿಯು ಕುಗ್ಗಿಹೋಗಿದೆಯಷ್ಟೆ.


ಗರ್ವಿಷ್ಠರು ನನ್ನನ್ನು ಬಹಳವಾಗಿ ಹಾಸ್ಯಮಾಡಿದರು; ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು