Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:26 - ಕನ್ನಡ ಸತ್ಯವೇದವು J.V. (BSI)

26 ನಾನು ಒಳ್ಳೇದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು, ಬೆಳಕನ್ನು ಎದುರುನೋಡುತ್ತಿರುವಾಗ ಕತ್ತಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು, ಬೆಳಕನ್ನು ಎದುರು ನೋಡುತ್ತಿರುವಾಗ ಕತ್ತಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಾನು ಒಳಿತನು ನಿರೀಕ್ಷಿಸಿದಾಗ ಕೇಡು ಬಂದೊದಗಿತು ಬೆಳಕನು ಎದುರು ನೋಡುವಾಗ ಕತ್ತಲು ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ನಾನು ಒಳ್ಳೆಯವುಗಳನ್ನು ನಿರೀಕ್ಷಿಸುತ್ತಿದ್ದಾಗ ನನಗೆ ಕೇಡುಗಳೇ ಆದವು. ನಾನು ಬೆಳಕಿಗಾಗಿ ಎದುರುನೋಡುತ್ತಿದ್ದಾಗ ನನಗೆ ಕತ್ತಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರಲು ಕೇಡು ಬಂದೊದಗಿತು; ನಾನು ಬೆಳಕನ್ನು ಎದುರು ನೋಡಲು, ಅಂಧಕಾರ ಬಂದು ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:26
14 ತಿಳಿವುಗಳ ಹೋಲಿಕೆ  

ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!


ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!


ಕೇಡು ಯೆಹೋವನಿಂದಿಳಿದು ಯೆರೂಸಲೇವಿುನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ಮೇಲುಂಟಾಗುವದಿಲ್ಲವೋ ಎಂದು ವೇದನೆಪಡುತ್ತಾರೆ.


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ನೀತಿವಂತರಿಗೋಸ್ಕರ ಪ್ರಕಾಶವೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಬಿತ್ತಲ್ಪಟ್ಟಿವೆ.


ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ [ಎಂದು ಅರಿಕೆಮಾಡಿಕೊಂಡೆನು.]


ಆಗ ನಾನು ಹೇಳಿಕೊಂಡದ್ದೇನಂದರೆ - ನನ್ನ ಗೂಡಿನಲ್ಲಿಯೇ ನಾನು ಸಾಯುವೆನು, ನನ್ನ ದಿನಗಳು ಮರಳಿನಂತೆ ಅಸಂಖ್ಯಾತವಾಗಿರುವವು,


ನಾನು ಹಾಳಾದದ್ದಕ್ಕೆ ಈ ಅಂಧಕಾರವು ನಿವಿುತ್ತವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.


ನಾನು ಮುಂದೆ ಹೋಗದ ಹಾಗೆ ಆತನು ನನ್ನ ದಾರಿಗೆ ಅಡ್ಡಗೋಡೆ ಹಾಕಿ ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾನೆ.


ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ ಲೋಕದಿಂದಲೇ ಅಟ್ಟಿಬಿಡುವರು.


ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವದು, ಅವನ ಮೇಲಣ [ತೂಗು] ದೀವಿಗೆಯು ನಂದುವದು.


ಆತನು ನನ್ನನ್ನು ಕರೆದುಕೊಂಡು ಹೋಗಿ ಬೆಳಕಿನಲ್ಲಲ್ಲ, ಕತ್ತಲಲ್ಲೇ ನಡೆಯಮಾಡಿದ್ದಾನೆ,


ಆದಕಾರಣ [ಯೆಹೋವನ] ನ್ಯಾಯನಿರ್ಣಯವು ನಮಗೆ ದೂರವಾಗಿದೆ. [ಆತನ] ರಕ್ಷಣಧರ್ಮದ ಕಾರ್ಯವು ನಮಗೆ ಸಂಧಿಸುವದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು