Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:15 - ಕನ್ನಡ ಸತ್ಯವೇದವು J.V. (BSI)

15 ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಹೊಟ್ಟೆಯಲ್ಲಿ ರೂಪಿಸಿದನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಗರ್ಭದಲ್ಲಿ ರೂಪಿಸಿದನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಾಯಗರ್ಭದಲ್ಲಿ ನನ್ನ ನಿರ್ಮಿಸಿದಾತನೆ ಅವರನೂ ನಿರ್ಮಿಸಲಿಲ್ಲವೆ? ತಾಯಗರ್ಭದಲ್ಲಿ ನಮ್ಮನು ರೂಪಿಸಿದಾತ ಅದೇ ದೇವರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರು ನನ್ನನ್ನು ನನ್ನ ತಾಯಿಯ ಗರ್ಭದಲ್ಲಿ ನಿರ್ಮಿಸಿದನು. ದೇವರು ನನ್ನ ಸೇವಕಸೇವಕಿಯರನ್ನೂ ನಿರ್ಮಿಸಿದನು. ದೇವರು ನಮ್ಮೆಲ್ಲರನ್ನು ನಮ್ಮ ತಾಯಂದಿರ ಗರ್ಭಗಳಲ್ಲಿ ರೂಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಗರ್ಭದಲ್ಲಿ ನನ್ನನ್ನು ಉಂಟುಮಾಡಿದ ದೇವರೇ ಅವರನ್ನೂ ಉಂಟು ಮಾಡಿದ್ದಾರಲ್ಲವೇ? ಅವರನ್ನೂ, ನನ್ನನ್ನೂ ತಾಯಂದಿರ ಗರ್ಭದಲ್ಲಿ ರೂಪಿಸಿದ ದೇವರು ಒಬ್ಬರೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:15
12 ತಿಳಿವುಗಳ ಹೋಲಿಕೆ  

ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ಬಡವರು ಬಲ್ಲಿದರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ನಮ್ಮೆಲ್ಲರಿಗೂ ಒಬ್ಬನೇ ತಂದೆಯಷ್ಟೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಸಿದನಲ್ಲಾ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸುವದೇಕೆ?


ಹಸಿದವರಿಗೆ ಅನ್ನವನ್ನು ಹಂಚುವದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವದು, ನಿನ್ನಂತೆ ನರನಾಗಿರುವ ಯಾವನಿಗೇ ಆಗಲಿ ಮುಖ ತಪ್ಪಿಸಿಕೊಳ್ಳದಿರುವದು, ಇವುಗಳೇ ನನಗೆ ಇಷ್ಟವಾದ ಉಪವಾಸವ್ರತವಲ್ಲವೇ.


ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ ಬಾಧಿಸುವದು ನಿನಗೆ ಸಂತೋಷವೋ?


ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿರಿ, ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಇಷ್ಟರಲ್ಲೇ ಅಪಹರಿಸಿದರು; ನಮ್ಮ ಯತ್ನವೇನೂ ಸಾಗುವದಿಲ್ಲ. ನಮ್ಮ ಹೊಲತೋಟಗಳು ಪರಾಧೀನವಾದವು ಎಂದು ಗುಣುಗುಟ್ಟಿದರು.


ಅದೇನಂದರೆ - ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ? ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ?


ದೇವರು [ನ್ಯಾಯಸ್ಥಾಪನೆಗೆ] ಏಳುವಾಗ ನಾನು ಏನು ಮಾಡೇನು? ಆತನು ವಿಚಾರಿಸುವಾಗ ಯಾವ ಉತ್ತರ ಕೊಟ್ಟೇನು?


ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು; ನಿನ್ನ ಆಜ್ಞೆಗಳನ್ನು ಕಲಿಯುವದಕ್ಕೆ ನನಗೆ ಬುದ್ಧಿಯನ್ನು ಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು