Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:27 - ಕನ್ನಡ ಸತ್ಯವೇದವು J.V. (BSI)

27 ಹೃದಯವು ಮರುಳುಗೊಂಡು ಕೈಯನ್ನು ಬಾಯಿ ಮುದ್ದಾಡಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೃದಯವು ಮರುಳುಗೊಂಡು, ಕೈಯನ್ನು ಬಾಯಿ ಮುದ್ದಾಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನನ್ನ ಹೃದಯ ಅವಕ್ಕೆ ಮಾರುಹೋಗಿದ್ದರೆ ಬಾಯ್ಮೇಲೆ ಕೈಯಿಟ್ಟು ಅವನ್ನು ಆರಾಧಿಸಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಮರುಳುಗೊಂಡು ನನ್ನ ಕೈಗೆ ಮುದ್ದಿಡುವುದರ ಮೂಲಕ ಸೂರ್ಯಚಂದ್ರರನ್ನು ಪೂಜಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನನ್ನ ಹೃದಯವು ಮರುಳುಗೊಂಡು, ನನ್ನ ಕೈ ಅವುಗಳನ್ನು ನನ್ನ ಬಾಯಿಂದ ಗೌರವದಿಂದ ಮುಗಿದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:27
12 ತಿಳಿವುಗಳ ಹೋಲಿಕೆ  

ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ಯಾಕಂದರೆ ದೇವರ ವಿಷಯವಾಗಿ ಅವರಿಗೆ ತಿಳುವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಘನಪಡಿಸಲಿಲ್ಲ; ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ವಿಚಾರ ಮಾಡಿಮಾಡಿ ಫಲ ಕಾಣಲಿಲ್ಲ; ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಯಿತು.


ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.


ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು, ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿ ಇಸ್ರಾಯೇಲ್ಯರನ್ನು ಉಳಿಸುವೆನು ಎಂದು ಹೇಳಿದನು.


ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ ಮಗನಾಗಲಿ ಮಗಳಾಗಲಿ ಪ್ರಾಣಪ್ರಿಯಳಾದ ಹೆಂಡತಿಯಾಗಲಿ ಆಪ್ತವಿುತ್ರನಾಗಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚಿಸಿ -


ಆದರೆ ನೀವು ಎಚ್ಚರದಿಂದಿರಬೇಕು; ನೀವು ಭ್ರಾಂತಿಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ


ಸೂರ್ಯನು ಪ್ರಕಾಶಿಸುವದನ್ನಾಗಲಿ ಚಂದ್ರನು ಕಳೆದುಂಬಿದವನಾಗಿ ಚರಿಸುವದನ್ನಾಗಲಿ ನಾನು ನೋಡಿದಾಗ


ಇದು ಸಹ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು, ಮೇಲಣ ಲೋಕದ ದೇವರಿಗೆ ದ್ರೋಹಿಯಾದಂತಾಯಿತು.


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶ ಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂಬಾರದು ನಮಸ್ಕರಿಸಲೂಬಾರದು.


ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರತಂದನು; ಆಹಾ, ಯೆಹೋವನ ಗುಡಿಯ ಬಾಗಿಲ ಮುಂದೆ ಮಂಟಪಕ್ಕೂ ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಗುಡಿಗೆ ಬೆನ್ನುಮಾಡಿ ಮೂಡಲಮುಖವಾಗಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು