Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:35 - ಕನ್ನಡ ಸತ್ಯವೇದವು J.V. (BSI)

35 ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು, ನೋಡಿರಿ, ಸರ್ವಶಕ್ತನು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಆಪಾದನಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು ನೋಡಿರಿ, ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಅಪಾದನೆಯ ಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ನನ್ನ ಕರೆಗೆ ಕಿವಿಗೊಡುವನೊಬ್ಬನು ಈಗಿದ್ದರೆ ಲೇಸಾಗಿರುತ್ತಿತ್ತು (ಇಗೋ ನೋಡಿ, ನನ್ನ ಕೈರುಜು; ನನಗುತ್ತರಕೊಡಲಿ ಸರ್ವಶಕ್ತನು;) ಬರೆದುಕೊಡಲಿ ವಿರೋಧಿ ನನ್ನ ಆಪಾದನಾ ಪತ್ರವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಅಯ್ಯೋ, ನನಗೆ ಕಿವಿಗೊಡುವುದಕ್ಕೆ ಯಾರಾದರೊಬ್ಬರು ಇರಬೇಕಿತ್ತು! ನಾನು ಸತ್ಯವನ್ನೇ ಹೇಳಿದೆನೆಂಬುದಕ್ಕೆ ಇದೋ, ಇಲ್ಲಿದೆ ನನ್ನ ಸಹಿ! ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ. ನನ್ನ ಮೇಲೆ ಅಪವಾದ ಹೊರಿಸುವವನು, ಆಪಾದನೆಯ ಪತ್ರವನ್ನು ಕೊಡಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ನನ್ನ ಕರೆಗೆ ಕಿವಿಗೊಡತಕ್ಕವರು ಒಬ್ಬರು ಈಗ ಇದ್ದರೆ ಎಷ್ಟೋ ಲೇಸು! ಸರ್ವಶಕ್ತರು ನನಗೆ ಉತ್ತರಕೊಡಲಿ; ನನ್ನ ವಿರೋಧಿಯು ನನ್ನ ಆಪಾದನಾ ಪತ್ರವನ್ನು ಬರೆದು ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:35
22 ತಿಳಿವುಗಳ ಹೋಲಿಕೆ  

ಹೀಗಿರಲು ಆತನು ಕಾಣುವದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಬಿದ್ದೇ ಇದೆ, ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳಾನೇ?


ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ ನ್ಯಾಯವು ನೆರವೇರದು.


ಕೃಪೆಮಾಡಿ ಈಡನ್ನು ಕೊಡು, ನನಗಾಗಿ ನೀನೇ ನಿನ್ನ ಹತ್ತಿರ ಹೊಣೆಯಾಗು, ಕೈ ಮೇಲೆ ಕೈ ಹಾಕತಕ್ಕವರು ನನಗೆ ಇನ್ನಾರೂ ಇಲ್ಲ.


ನೀನು ವಿಮುಖನಾಗಿ ನನ್ನನ್ನು ಶತ್ರುವೆಂದೆಣಿಸಿರುವದೇಕೆ?


ಆದರೆ ನಾನು ಸರ್ವಶಕ್ತನ ಸಂಗಡ ಮಾತಾಡಬೇಕು, ದೇವರೊಂದಿಗೆ ವಾದಿಸಲು ಅಪೇಕ್ಷಿಸುತ್ತೇನೆ.


ನಿನ್ನ ವಾದಿಯ ಸಂಗಡ ಇನ್ನೂ ದಾರಿಯಲ್ಲಿರುವಾಗಲೇ ಅವನ ಕೂಡ ಬೇಗ ಸಮಾಧಾನ ಮಾಡಿಕೋ; ಇಲ್ಲದಿದ್ದರೆ ಆ ವಾದಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು; ನ್ಯಾಯಾಧಿಪತಿಯು ನಿನ್ನನ್ನು ಓಲೇಕಾರನ ಕೈಗೆ ಒಪ್ಪಿಸಿಕೊಟ್ಟಾನು; ಆಗ ನೀನು ಸೆರೆಯಲ್ಲಿ ಬಿದ್ದೀಯೆ.


ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.


ನೋಡು, ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ.


ನಾನು ಕರ್ರಗಾಗಿ ಅಲೆಯುತ್ತೇನೆ; ಆದರೆ ಆ ಕಪ್ಪು ಸೂರ್ಯಸಂತಾಪದಿಂದಲ್ಲ, ಸಂಘದಲ್ಲಿ ನಿಂತು ಅಂಗಲಾಚಿಕೊಳ್ಳುತ್ತೇನೆ.


ನನ್ನ ಹಗೆಗೆ ದುಷ್ಟನ ಗತಿಯಾಗಲಿ, ನನಗೆ ವಿರುದ್ಧವಾಗಿ ಎದ್ದವನು ಅನ್ಯಾಯಗಾರನ ಅವಸ್ಥೆಯನ್ನು ಹೊಂದಲಿ!


ನನ್ನ ಮೇಲೆ ತನ್ನ ಕೋಪಾಗ್ನಿಯನ್ನು ಧಗಧಗಿಸಿ ನನ್ನನ್ನು ವೈರಿಯೆಂದೆಣಿಸಿದ್ದಾನೆ.


ನಾನು ಮೊರೆಯಿಟ್ಟರೂ ನೀನು ಉತ್ತರಕೊಡುವದಿಲ್ಲ, ಎದ್ದುನಿಂತರೂ ನನ್ನನ್ನು [ಸುಮ್ಮನೆ] ನೋಡುತ್ತಿರುವಿ.


ಆದರೂ ನಾಶನಕ್ಕೆ ಒಳಗಾದವನು ಕೈಚಾಚುವದಿಲ್ಲವೋ? ಆಪತ್ತಿಗೆ ಒಳಪಟ್ಟವನು ಕೂಗಿಕೊಳ್ಳುವದಿಲ್ಲವೋ?


ಅದನ್ನು ಹೆಗಲ ಮೇಲೆ ಇಟ್ಟುಕೊಳ್ಳುತ್ತಿದ್ದೆನು, ಕಿರೀಟವನ್ನಾಗಿ ಧರಿಸುತ್ತಿದ್ದೆನು.


ಆಕ್ಷೇಪಕನು ಸರ್ವಶಕ್ತನ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ ಎಂದು ಹೇಳಿದನು.


ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ, ನನ್ನ ಅರಿಕೆಗೆ ಕಿವಿಗೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು