Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:36 - ಕನ್ನಡ ಸತ್ಯವೇದವು J.V. (BSI)

36 ಅದನ್ನು ಹೆಗಲ ಮೇಲೆ ಇಟ್ಟುಕೊಳ್ಳುತ್ತಿದ್ದೆನು, ಕಿರೀಟವನ್ನಾಗಿ ಧರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅದನ್ನು ಹೆಗಲ ಮೇಲೆ ಇಟ್ಟುಕೊಳ್ಳುತ್ತಿದ್ದೆನು, ಕಿರೀಟವನ್ನಾಗಿ ಧರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆ ಲಿಖಿತವನ್ನು ಹೆಗಲ ಮೇಲೆ ಹೊತ್ತು ನಡೆಯುತ್ತಿದ್ದೆ ಅದನ್ನು ಪೇಟವಾಗಿ ತಲೆಗೆ ಸುತ್ತಿಕೊಳ್ಳುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಖಂಡಿತವಾಗಿಯೂ ನಾನು ಆ ಪತ್ರವನ್ನು ನನ್ನ ಹೆಗಲ ಮೇಲೆ ಇಟ್ಟುಕೊಳ್ಳುವೆನು. ಅದನ್ನು ಕಿರೀಟವನ್ನಾಗಿ ಧರಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ನಾನು ನನ್ನ ಹೆಗಲಲ್ಲಿ ಆ ಲಿಖಿತವನ್ನು ನಿಶ್ಚಯವಾಗಿ ಹೊತ್ತು ನಡೆಯುತ್ತಿದ್ದೆ; ಅದನ್ನು ಕಿರೀಟವಾಗಿ ಧರಿಸಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:36
7 ತಿಳಿವುಗಳ ಹೋಲಿಕೆ  

ಅವನು ದಾವೀದನ ಮನೆಯ ಬೀಗದ ಕೈಯನ್ನು ತನ್ನ ಹೆಗಲ ಮೇಲೆ ವಹಿಸಿಕೊಳ್ಳುವಂತೆ ಮಾಡುವೆನು; ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು.


ಹೀಗಿರಲಾಗಿ ಪ್ರಿಯರೂ ಇಷ್ಟರೂ ಆದ ನನ್ನ ಸಹೋದರರೇ, ನನಗೆ ಸಂತೋಷವೂ ಜಯಮಾಲೆಯೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ; ಪ್ರಿಯರೇ.


ನೀನು ಯೆಹೋವನ ಕೈಯಲ್ಲಿ ಸುಂದರ ಕಿರೀಟವಾಗಿಯೂ ನಿನ್ನ ದೇವರ ಹಸ್ತದಲ್ಲಿ ರಾಜಶಿರೋವೇಷ್ಟನವಾಗಿಯೂ ಇರುವಿ.


ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು, ನನ್ನ ನ್ಯಾಯವೇ ನನಗೆ ನಿಲುವಂಗಿಯೂ ಮುಂಡಾಸವೂ ಆಗಿತ್ತು.


ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಅವು ಇಸ್ರಾಯೇಲ್ಯರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗೆಲ್ಲಾ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವದಕ್ಕಾಗಿ ತನ್ನ ಎರಡು ಭುಜಗಳ ಮೇಲೆ ಧರಿಸಿಕೊಂಡು ಹೋಗುವನು.


ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು, ನೋಡಿರಿ, ಸರ್ವಶಕ್ತನು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಆಪಾದನಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ!


ಪ್ರಭುವಿನಂತೆ ಆತನ ಸಾನ್ನಿಧ್ಯದಲ್ಲಿ ಪ್ರವೇಶಿಸಿ ನನ್ನ ಹೆಜ್ಜೆಗಳ ಲೆಕ್ಕವನ್ನು ಆತನಿಗೆ ಅರಿಕೆಮಾಡಿಕೊಳ್ಳುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು