Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:39 - ಕನ್ನಡ ಸತ್ಯವೇದವು J.V. (BSI)

39 ನಾನು ಹಣಕೊಡದೆ ಅದರ ಸಾರವನ್ನನುಭವಿಸಿ ಅದರ ದಣಿಗಳ ಪ್ರಾಣ ಹೋದದ್ದಕ್ಕೆ ಕಾರಣನಾಗಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನಾನು ಹಣಕೊಡದೆ ಅದರ ಸಾರವನ್ನು ಅನುಭವಿಸಿ, ಅದರ ದಣಿಗಳ ಪ್ರಾಣ ಹಾನಿಗೆ ಕಾರಣನಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಕೂಲಿಕೊಡದೆ ಆ ಭೂಮಿಯ ಫಲವನು ನಾನು ಸವಿದಿದ್ದರೆ ಅದರ ದಣಿಗಳ ಪ್ರಾಣಹಾನಿಗೆ ನಾನು ಕಾರಣನಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನಾನು ರೈತರಿಗೆ ಬೆಳೆಯಲ್ಲಿ ಪಾಲು ಕೊಟ್ಟೆನು; ಯಾರೂ ಹಸಿವೆಯಿಂದ ಇರಲು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಕೂಲಿಕೊಡದೆ ಭೂಮಿಯ ಫಲವನ್ನು ನಾನು ತಿಂದಿದ್ದರೆ, ಅದರ ಯಜಮಾನರ ಪ್ರಾಣಹಾನಿಗೆ ಕಾರಣನಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:39
11 ತಿಳಿವುಗಳ ಹೋಲಿಕೆ  

ಅವನಿಗೆ - ನೀನು ಕೊಲೆ ಮಾಡಿ ಸ್ವಾಸ್ತ್ಯವನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು ಎಂಬದೇ.


ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ.


ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯನುಸಾರ ನಿನ್ನಲ್ಲಿ ರಕ್ತಸುರಿಸುತ್ತಲೇ ಇದ್ದಾರೆ.


ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂವಿುಯು ತನ್ನಲ್ಲಿ ಇಂಗಿದ್ದ ರಕ್ತವನ್ನು ವ್ಯಕ್ತಗೊಳಿಸುವದು, ತನ್ನ ನಿವಾಸಿಗಳಲ್ಲಿ ಹತರಾಗಿದ್ದವರನ್ನು ಇನ್ನು ಮರೆಮಾಜದು.


ಸೂರೆಮಾಡುವವರೆಲ್ಲರ ದಾರಿಯೂ ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು.


ನೀನು ಭೂವಿುಯನ್ನು ವ್ಯವಸಾಯ ಮಾಡಿದರೂ ಇದು ಇನ್ನು ಮುಂದೆ ನಿನಗೆ ಫಲಿಸುವದಿಲ್ಲ. ನೀನು ಭೂಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಿರುವಿ ಅಂದನು.


ತಮ್ಮ ಹೊಟ್ಟೆಗಾಗಿ ಬೈಲಿನಲ್ಲಿ ಸೊಪ್ಪುಸೆದೆಯನ್ನು ಕೊಯ್ದುಕೊಳ್ಳುವರು, ದುಷ್ಟನ ದ್ರಾಕ್ಷೇತೋಟದಲ್ಲಿ ಹಕ್ಕಲಾಯುವರು.


ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; ಹಸಿವುಗೊಂಡೇ ಸಿವುಡುಗಳನ್ನು ಹೊರುವರು;


ತನ್ನ ಅರಮನೆಯನ್ನು ದುರ್ನೀತಿಯಿಂದಲೂ ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು