ಯೋಬ 31:40 - ಕನ್ನಡ ಸತ್ಯವೇದವು J.V. (BSI)40 ಗೋದಿಗೆ ಬದಲಾಗಿ ಮುಳ್ಳುಗಳೂ ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ. ಹೀಗೆ ಯೋಬನ ಮಾತುಗಳು ಮುಗಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಗೋದಿಗೆ ಬದಲಾಗಿ ಮುಳ್ಳುಗಳೂ, ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ.” ಎಂದನು. ಹೀಗೆ ಯೋಬನ ಮಾತುಗಳು ಮುಗಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಅದು ಬೆಳೆಯಲಿ ಮುಳ್ಳುಗಳನ್ನು ಗೋದಿಗೆ ಬದಲಾಗಿ ಹಣಜಿಹುಲ್ಲನು ಜವೆಗೋದಿಗೆ ಪ್ರತಿಯಾಗಿ.” ಇತಿ, ಯೋಬನ ಮಾತುಗಳು ಮುಗಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಇವುಗಳಲ್ಲಿ ನಾನು ಯಾವುದನ್ನಾದರೂ ಮಾಡಿದ್ದರೆ, ಗೋಧಿ ಮತ್ತು ಬಾರ್ಲಿಗಳ ಬದಲಾಗಿ ನನ್ನ ಹೊಲಗಳಲ್ಲಿ ಮುಳ್ಳುಗಳೂ ಕಳೆಗಳೂ ಬೆಳೆಯಲಿ.” ಹೀಗೆ ಯೋಬನ ಮಾತುಗಳು ಮುಗಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಗೋಧಿಗೆ ಬದಲಾಗಿ ಮುಳ್ಳುಗಳೂ, ಜವೆಗೋಧಿಗೆ ಬದಲಾಗಿ ಕಳೆಗಳೂ ಬೆಳೆಯಲಿ.” ಹೀಗೆ ಯೋಬನ ಮಾತುಗಳು ಮುಗಿದವು. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.