Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:6 - ಕನ್ನಡ ಸತ್ಯವೇದವು J.V. (BSI)

6 ಒಂದು ವೇಳೆ ನಾನು ಕಪಟದ ಜೊತೆಯಲ್ಲಿ ನಡೆದು ಮೋಸವನ್ನು ಹಿಂಬಾಲಿಸಿ ಓಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ನನ್ನನ್ನು ನ್ಯಾಯವಾದ ತ್ರಾಸಿನಲ್ಲಿ ತೂಗಿ, ನನ್ನ ಯಥಾರ್ಥತ್ವವನ್ನು ತಿಳಿದುಕೊಳ್ಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತೂಗಿನೋಡಲಿ ನನ್ನನು ನ್ಯಾಯದ ತಕ್ಕಡಿಯಲಿ ಹೀಗೆ ನನ್ನ ಸತ್ಯತೆಯನು ದೇವರು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ನ್ಯಾಯವಾದ ಅಳತೆಮಾನಗಳಿಂದ ನನ್ನನ್ನು ತೂಗಿದರೆ, ನಾನು ನಿರಪರಾಧಿಯೆಂದು ಆತನಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ನ್ಯಾಯದ ತಕ್ಕಡಿಯಲ್ಲಿ ನನ್ನನ್ನು ತೂಗಿ ನೋಡಲಿ; ನಾನು ನಿರ್ದೋಷಿ ಎಂದು ದೇವರು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:6
19 ತಿಳಿವುಗಳ ಹೋಲಿಕೆ  

ತೆಕೇಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡು ಬಂದಿದ್ದೀ;


ಆಗ ನಾನು ಅವರಿಗೆ - ನಾನೆಂದೂ ನಿಮ್ಮ ಗುರುತು ಕಾಣೆನು; ಧರ್ಮವನ್ನು ಮೀರಿನಡೆಯುವವರೇ, ನನ್ನಿಂದ ತೊಲಗಿಹೋಗಿರಿ ಎಂದು ಎಲ್ಲರ ಮುಂದೆ ಹೇಳಿಬಿಡುವೆನು.


ಇನ್ನು ಮುಂದೆ ಹವ್ಮಿುನಿಂದ ನುಡಿಯಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗುವನು.


ಕಳ್ಳತಕ್ಕಡಿಯೂ ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯೋ?


ಶಿಷ್ಟನ ಮಾರ್ಗವು ನೇರವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ಸಮಮಾಡುತ್ತಿ.


ನ್ಯಾಯದ ತ್ರಾಸುತಕ್ಕಡಿಗಳು ಯೆಹೋವನ ಏರ್ಪಾಡು; ಕಟ್ಲೆಚೀಲದ ಕಲ್ಲುಗಳೆಲ್ಲಾ ಆತನ ಕೈಕೆಲಸವೇ.


ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗೊತ್ತುಮಾಡು.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವದು.


ಆಹಾ, ತ್ರಾಸಿನಲ್ಲಿ ನನ್ನ ವಿಪತ್ತನ್ನು ಇಟ್ಟು ಅದರಿಂದ ನನ್ನ ಕರಕರೆಯ ಭಾರವನ್ನು ತೂಕ ಮಾಡುವದಾದರೆ ಎಷ್ಟೋ ಒಳ್ಳೇದು.


ಇದಕ್ಕೆ ಸಾಕ್ಷಿ; ದೇವದೇವನಾದ ಯೆಹೋವನಿಗೆ ಇದು ಗೊತ್ತುಂಟು. ಇಸ್ರಾಯೇಲ್ಯರಿಗೂ ಗೊತ್ತಾಗುವದು. ನಾವು ದ್ರೋಹಿಗಳೂ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರೂ ಆಗಿದ್ದರೆ ಆತನು ನಮ್ಮನ್ನು ಈ ಹೊತ್ತೇ ಕೈಬಿಡಲಿ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.


ಆಗ ನನ್ನ ವಿಪತ್ತು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವುಳ್ಳದ್ದೆಂದು ಗೊತ್ತಾಗುವದು; ಆದದರಿಂದಲೇ ಆತುರದಿಂದ ಮಾತಾಡಿದ್ದೇನೆ.


ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.


ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವದನ್ನು ನಿಲ್ಲಿಸಿಬಿಟ್ಟರು.


ನರನ ನಡತೆಯು ಸ್ವಂತ ದೃಷ್ಟಿಗೆ ನೆಟ್ಟಗೆ; ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು