Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:9 - ಕನ್ನಡ ಸತ್ಯವೇದವು J.V. (BSI)

9 ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮರುಳುಗೊಂಡು ನಾನು ನೆರೆಯವನ ಬಾಗಲಲ್ಲಿ ಹೊಂಚಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮೋಹಗೊಂಡು, ನಾನು ನೆರೆಯವನ ಬಾಗಿಲಲ್ಲಿ ಹೊಂಚು ಹಾಕಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ಹೃದಯ ಪರಸ್ತ್ರೀಗೆ ಮಾರುಹೋಗಿದ್ದರೆ ನೆರೆಯವಳ ಬಾಗಿಲ ಬಳಿ ನಾನು ಹೊಂಚುಹಾಕಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಒಂದುವೇಳೆ ನಾನು ಪರಸ್ತ್ರೀಯಲ್ಲಿ ಮರುಳುಗೊಂಡಿದ್ದರೆ, ನನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡಲು ಅವನ ಮನೆಯ ಬಾಗಿಲಲ್ಲಿ ಕಾದುಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನನ್ನ ಹೃದಯವು ಪರಸ್ತ್ರೀಗೆ ಮರುಳಾಗಿ, ನನ್ನ ನೆರೆಯವನ ಬಾಗಿಲ ಹತ್ತಿರ ನಾನು ಹೊಂಚುಹಾಕಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:9
16 ತಿಳಿವುಗಳ ಹೋಲಿಕೆ  

ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು, ಯಾವದಂದರೆ, ಕೆಟ್ಟ ಹೆಂಗಸೇ. ಅವಳು ಬೋನು, ಅವಳ ಹೃದಯ ಬಲೆ, ಅವಳ ಕೈ ಪಾಶ; ದೇವರು ಒಲಿದವನು ಇವಳಿಂದ ತಪ್ಪಿಸಿಕೊಳ್ಳುವನು; ಪಾಪಿಯೋ ಅವಳ ಕೈಗೆ ಸಿಕ್ಕಿಬೀಳುವನು.


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಯಥಾರ್ಥಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡಿಯಲಿಲ್ಲ.


ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ - ನೀನು ಅವನನ್ನು ಮರುಳುಗೊಳಿಸಿ ಅವನ ಮಹಾಶಕ್ತಿಯ ಮೂಲ ಯಾವದೆಂಬದನ್ನೂ ನಾವು ಅವನನ್ನು ಗೆದ್ದು ಕಟ್ಟಿ ಕುಂದಿಸುವದು ಹೇಗೆಂಬದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು ಎಂದು ಹೇಳಿದರು.


ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬೆಂಕಿ ಹೊತ್ತಿಸಿ ಉರಿಸಿ ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ.


ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಹೇಕರಿಸುತ್ತಿದ್ದನು.


ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ; ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.


ನಿನ್ನ ಹೃದಯವು ಅವಳ ಬೆಡಗನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣು ರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.


ಅಂಥ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್‍ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ. ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ; ಅವನು ತನ್ನ ದೇವರಿಗೆ ವಿಶೇಷ ಪ್ರಿಯನು; ಆದದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲ್ಯರ ಮೇಲೆ ಅರಸನನ್ನಾಗಿ ನೇವಿುಸಿದನು. ಆದರೂ ಅನ್ಯದೇಶಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿದರು.


ಅವನನ್ನು ತನ್ನ ಸವಿಮಾತುಗಳಿಂದ ಬಲಾತ್ಕರಿಸಿ ಬಹಳವಾಗಿ ಪ್ರೇರಿಸಿ ಸಮ್ಮತಿಪಡಿಸುತ್ತಾಳೆ.


ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ. ಯುವತಿಯ ಮೇಲೆ ಹೇಗೆ ಕಣ್ಣಿಟ್ಟೇನು?


ಯಾವನಾದರೂ ಪರಪತ್ನಿಯನ್ನು ಸಂಗವಿುಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ ಮನೆ ಗಂಡಾಳು ಹೆಣ್ಣಾಳು ಎತ್ತು ಕತ್ತೆ ಮುಂತಾದ ಯಾವದನ್ನೂ ಆಶಿಸಬಾರದು.


ಮಡಲಲ್ಲಿ ಬೆಂಕಿಯನ್ನಿಟ್ಟುಕೊಂಡರೆ ಬಟ್ಟೆ ಸುಡುವದಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು