Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:1 - ಕನ್ನಡ ಸತ್ಯವೇದವು J.V. (BSI)

1 ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವದನ್ನು ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೋಬನು ತಾನು ಸತ್ಯವಂತನೆಂದು ಸಾಧಿಸಿದ್ದನು. ಇದನ್ನು ಕೇಳಿದ ಅವನ ಮೂವರು ಮಿತ್ರರು ವಾದಿಸುವುದನ್ನು ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೋಬನು ತಾನು ನಿರಪರಾಧಿಯೆಂದು ನಂಬಿದ್ದರಿಂದ ಅವನ ಮೂವರು ಗೆಳೆಯರು ಮತ್ತೆ ವಾದ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೋಬನು ತಾನು ನೀತಿವಂತನೆಂದು ಸಾಧಿಸಿದ್ದನು. ಆದ್ದರಿಂದ ಆ ಮೂರು ಸ್ನೇಹಿತರು ಯೋಬನಿಗೆ ಉತ್ತರ ಕೊಡುವುದನ್ನು ನಿಲ್ಲಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:1
14 ತಿಳಿವುಗಳ ಹೋಲಿಕೆ  

ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನೂ ಪಾಪವಿಲ್ಲ.


ನಾನು ಅಪರಾಧಿಯಲ್ಲವೆಂದು ನಿನಗೆ ಗೊತ್ತಾಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವಷ್ಟೆ,


ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸಲು ಅವಕಾಶವಾಗಿ ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವದು.


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೇತನವನ್ನು ಆತನ ಮುಂದೆ ಸ್ಥಾಪಿಸುವೆನು.


ನಾನು ದೇವರ ಮುಂದೆ - ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಅನ್ನುವೆನು.


ದಯವಿಟ್ಟು ನನ್ನ ವಿಚಾರಣೆಗೆ ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆಗೆ ತಿರುಗಿಕೊಳ್ಳಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.


ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬದಾಗಿ ನಿರ್ಣಯವಾಗುವದೆಂದು ನನಗೆ ಗೊತ್ತೇ ಇದೆ.


ನಿನ್ನ ಪಾಪವೇ ನಿನ್ನ ಬಾಯಿಗೆ [ಮಾತುಗಳನ್ನು] ಕಲಿಸಿಕೊಡುತ್ತದೆ, ಯುಕ್ತಿವಂತರ ಭಾಷೆಯನ್ನು ಆರಿಸಿಕೊಂಡಿದ್ದೀ.


ನಿನ್ನ ಕೆಟ್ಟತನವು ದೊಡ್ಡದೇ ಸರಿ, ನಿನ್ನ ಪಾಪಗಳಿಗೆ ವಿುತಿಯೇ ಇಲ್ಲ.


ನಿನ್ನ ನುಡಿಯ ಧ್ವನಿಯನ್ನು ಕೇಳಿದ್ದೇನೆ, ನನ್ನ ಕಿವಿಗೆ ಬಿದ್ದ ಈ ಮಾತುಗಳನ್ನು ಆಡೇ ಆಡಿದ್ದೀ -


ಏನು! ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವಿಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು