Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:2 - ಕನ್ನಡ ಸತ್ಯವೇದವು J.V. (BSI)

2 ಆಮೇಲೆ ಬೂಜ್ ಕುಲಕ್ಕೂ ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಹತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಬೂಜ್‍ನವನಾದ ಬರಕೇಲನ ಮಗ ಎಲೀಹುವನಿಗೆ ಸಿಟ್ಟೇರಿತು. ಇವನು ರಾಮ್‍ಗೋತ್ರಕ್ಕೆ ಸೇರಿದವನು. ಯೋಬನು ತಾನು ದೇವರಿಗಿಂತ ನ್ಯಾಯವಂತನೆಂದು ಎಣಿಸಿಕೊಂಡ ಕಾರಣ ಎಲೀಹುವನಿಗೆ ಸಿಟ್ಟುಹತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಲ್ಲಿ ಯೌವನಸ್ಥನಾದ ಎಲೀಹು ಸಹ ಇದ್ದನು. ಎಲೀಹು ಬರಕೇಲನ ಮಗನು. ಬರಕೇಲನು ಬೂಜ್ ಕುಲದವನು. ಎಲೀಹು, ರಾಮ್ ಸಂತಾನಕ್ಕೆ ಸೇರಿದವನು. ಎಲೀಹುವಿಗೆ ಯೋಬನ ಮೇಲೆ ಬಹು ಕೋಪಬಂದಿತು. ಯಾಕೆಂದರೆ ಯೋಬನು ತಾನು ದೇವರಿಗಿಂತಲೂ ನೀತಿವಂತನೆಂದು ಪ್ರತಿಪಾದಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ರಾಮ ಗೋತ್ರದ ಬೂಜ್ಯನಾದ ಬರಕೇಲನ ಮಗ ಎಲೀಹು, ಯೋಬನ ಮೇಲೆ ಬಹು ಕೋಪಗೊಂಡನು. ಯೋಬನು ದೇವರಿಗಿಂತ ತನ್ನನ್ನು ನ್ಯಾಯವಂತನೆಂದು ಸ್ಥಾಪಿಸಿದ್ದರಿಂದ, ಎಲೀಹು ಅವನ ಮೇಲೆ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:2
18 ತಿಳಿವುಗಳ ಹೋಲಿಕೆ  

ಅವರು ಯಾರಾರಂದರೆ - ಅವನ ಚೊಚ್ಚಲನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲ್, ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂವೇಲ್ ಎಂಬಿವರೇ.


ಏನು! ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವಿಯೋ?


[ನೀತಿಯಿಂದ] ನನಗೇನು ಪ್ರಯೋಜನವಾಯಿತು. ಪಾಪಮಾಡದೆ ಇದ್ದದರಿಂದ ನನಗಾದ ಹೆಚ್ಚು ಲಾಭವೇನು ಅಂದುಕೊಳ್ಳುವದು


ನೀವು ನ್ಯಾಯವಂತರೆಂದು ನಾನು ಒಪ್ಪುವದು ದೂರವಾಗಿರಲಿ, ಸಾಯುವ ತನಕ ನನ್ನ ಯಥಾರ್ಥತ್ವದ ಹೆಸರನ್ನು ಕಳಕೊಳ್ಳೆನು.


ಕೋಪಮಾಡಬೇಕಾದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;


ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವದಕ್ಕೆ ಅಪೇಕ್ಷಿಸಿ - ನನ್ನ ನೆರೆಯವನು ಯಾರು ಎಂದು ಯೇಸುವನ್ನು ಕೇಳಲು


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.


ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದೀ, ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತೀ.


ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ [ಕೇಳಿರಿ]!


ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ ಬಾಧಿಸುವದು ನಿನಗೆ ಸಂತೋಷವೋ?


ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. ನನ್ನ ಜೀವಮಾನದ ಯಾವ ದಿನಚರ್ಯದಲ್ಲಿಯೂ ಮನಸ್ಸಾಕ್ಷಿಯು ತಪ್ಪು ತೋರಿಸುವದಿಲ್ಲ.


ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದದರಿಂದ ಅವನು ಅವರ ಮೇಲೆಯೂ ಕೋಪಿಸಿಕೊಂಡನು.


ನಿನ್ನ ಪಾಪವೇ ನಿನ್ನ ಬಾಯಿಗೆ [ಮಾತುಗಳನ್ನು] ಕಲಿಸಿಕೊಡುತ್ತದೆ, ಯುಕ್ತಿವಂತರ ಭಾಷೆಯನ್ನು ಆರಿಸಿಕೊಂಡಿದ್ದೀ.


ನಿನ್ನ ಕೆಟ್ಟತನವು ದೊಡ್ಡದೇ ಸರಿ, ನಿನ್ನ ಪಾಪಗಳಿಗೆ ವಿುತಿಯೇ ಇಲ್ಲ.


ನಿನ್ನ ನುಡಿಯ ಧ್ವನಿಯನ್ನು ಕೇಳಿದ್ದೇನೆ, ನನ್ನ ಕಿವಿಗೆ ಬಿದ್ದ ಈ ಮಾತುಗಳನ್ನು ಆಡೇ ಆಡಿದ್ದೀ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು