Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:22 - ಕನ್ನಡ ಸತ್ಯವೇದವು J.V. (BSI)

22 ಮುಖಸ್ತುತಿಯನ್ನು ಮಾಡುವದಕ್ಕೆ ನನ್ನಿಂದಾಗುವದಿಲ್ಲ; ಮಾಡಿದರೆ ನನ್ನ ಸೃಷ್ಟಿಕರ್ತನು ನನ್ನನ್ನು ಬೇಗ ಹೊತ್ತುಕೊಂಡು ಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮುಖಸ್ತುತಿಯನ್ನು ಮಾಡುವುದಕ್ಕೆ ನನ್ನಿಂದಾಗುವುದಿಲ್ಲ; ಮಾಡಿದರೆ ನನ್ನ ಸೃಷ್ಟಿಕರ್ತನು ನನ್ನನ್ನು ಬೇಗ ನಿರ್ಮೂಲ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಮುಖಸ್ತುತಿ ಮಾಡಲು ನನ್ನಿಂದಾಗುವುದಿಲ್ಲ. ಮಾಡಿದರೆ ಸೃಷ್ಟಿಕರ್ತ ನನ್ನನು ಬೇಗ ನಿರ್ಮೂಲಮಾಡಬಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮುಖಸ್ತುತಿ ಮಾಡುವುದೇ ನನಗೆ ತಿಳಿದಿಲ್ಲ. ಮುಖಸುತ್ತಿ ಮಾಡುವುದು ನನಗೆ ಗೊತ್ತಿದ್ದರೆ, ನನ್ನ ಸೃಷ್ಟಿಕರ್ತನು ನನ್ನನ್ನು ಬಹು ಬೇಗನೆ ಶಿಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೊಗಳುವುದರಲ್ಲಿ ನಾನು ಪ್ರವೀಣನಾಗಿದ್ದರೆ, ನನ್ನ ಸೃಷ್ಟಿಕರ್ತ ಆಗಿರುವವರು ನನ್ನನ್ನು ಬೇಗ ತೆಗೆದುಕೊಂಡು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:22
10 ತಿಳಿವುಗಳ ಹೋಲಿಕೆ  

ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ, ಮತ್ತು ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.


ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.


ನೆರೆಯವನೊಂದಿಗೆ ವಂಚಿಸುವ ಸವಿನುಡಿಗಳನ್ನಾಡುವವನು ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.


ಯಾವನು ಸ್ವಲಾಭಕ್ಕಾಗಿ ವಿುತ್ರರ ಮೇಲೆ ದೂರು ಹೊರಿಸುವನೋ ಅವನ ಮಕ್ಕಳು ಕಂಗೆಡುವರು.


ಅದೇನಂದರೆ - ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ? ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ?


ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು.


ಅದಿರಲಿ; ಯೋಬನೇ, ನನ್ನ ನುಡಿಯನ್ನು ಕೇಳು, ನನ್ನ ಮಾತುಗಳಿಗೆಲ್ಲಾ ಕಿವಿಗೊಡು,


ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.


ಮುಖಸ್ತುತಿ ಮಾಡುವವನಿಗಿಂತಲೂ ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು