Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:6 - ಕನ್ನಡ ಸತ್ಯವೇದವು J.V. (BSI)

6 ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು - ನಾನು ಯೌವನಸ್ಥನು, ನೀವು ಅತಿವೃದ್ಧರು; ಆದದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆ ಮಾಡಲು ಅಂಜಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು; ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಬೂಜಿನವನಾದ ಬರಕೇಲನ ಮಗ ಎಲೀಹುವನು ಕೊಟ್ಟ ಉತ್ತರ: “ನಾನು ಕಿರಿಯವನು, ನೀವು ಎಷ್ಟೋ ಹಿರಿಯವರು ಎಂದೇ ಸಂಕೋಚಪಟ್ಟೆನು ನನ್ನ ಅಭಿಪ್ರಾಯ ತಿಳಿಸಲು ಅಂಜಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಎಲೀಹು ಮಾತಾಡಲಾರಂಭಿಸಿ ಹೀಗೆಂದನು: “ನಾನು ವಯಸ್ಸಿನಲ್ಲಿ ಚಿಕ್ಕವನು, ನೀವು ವೃದ್ಧರು. ಆದಕಾರಣ, ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸಲು ಹಿಂಜರಿದೆನು ಮತ್ತು ಹೆದರಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಬೂಜ್ಯನಾದ ಬರಕೇಲನ ಮಗ ಎಲೀಹು ಹೇಳಿದ್ದೇನೆಂದರೆ: “ನಾನು ಪ್ರಾಯದಲ್ಲಿ ಯುವಕನು, ನೀವು ಪ್ರಾಯಸ್ಥರು. ಆದ್ದರಿಂದ ನಾನು ಸಂಕೋಚಗೊಂಡು ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವುದಕ್ಕೆ ಭಯಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:6
14 ತಿಳಿವುಗಳ ಹೋಲಿಕೆ  

ತಲೆನರೆತು ನಿಮ್ಮಪ್ಪನಿಗಿಂತ ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ.


ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಹಾಗೆಯೇ ಎಲ್ಲಾ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಯೌವನಸ್ಥರನ್ನು ಎಚ್ಚರಿಸು.


ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು ಸಲ್ಲಿಸಿರಿ.


ನೀನು ಆದಿಪುರುಷನೋ? ಬೆಟ್ಟಗಳಿಗಿಂತ ಮುಂಚೆ ಹುಟ್ಟಿದಿಯಾ?


ತಲೆನರೆತ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.


ಆಮೇಲೆ ಬೂಜ್ ಕುಲಕ್ಕೂ ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಹತ್ತಿತು.


ಈ ಮೂವರ ಬಾಯಲ್ಲಿ ತಕ್ಕ ಉತ್ತರವಿಲ್ಲದ್ದನ್ನು ಕಂಡು ರೋಷಗೊಂಡನು.


ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದೀರ್ಘಾಯುವೂ ವಿವೇಕವೂ ಒಂದೇನೋ?


ಆಗ ಎಲೀಹು ಮತ್ತೆ ಇಂತೆಂದನು -


ಆಮೇಲೆ ಎಲೀಹು ಮತ್ತೆ ಇಂತೆಂದನು -


ಆಮೇಲೆ ಎಲೀಹು ಮತ್ತೆ ಹೀಗೆಂದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು