Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:8 - ಕನ್ನಡ ಸತ್ಯವೇದವು J.V. (BSI)

8 ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಮಾನವರಿಗುಂಟು ಒಂದು ಆತ್ಮ ಸರ್ವಶಕ್ತಸ್ವಾಮಿಯ ಉಸಿರಿನ ಮೂಲಕ ಅವರಿಗೆ ದೊರಕುತ್ತದೆ ವಿವೇಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಮನುಷ್ಯರಲ್ಲಿರುವ ದೇವರಾತ್ಮನು ಅಂದರೆ ಸರ್ವಶಕ್ತನಾದ ದೇವರ ‘ಉಸಿರು’ ಮನುಷ್ಯರಿಗೆ ಜ್ಞಾನವನ್ನು ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಮನುಷ್ಯನಲ್ಲಿ ಒಂದು ಆತ್ಮ ಉಂಟು; ಸರ್ವಶಕ್ತರ ಶ್ವಾಸವು ಅವನಿಗೆ ತಿಳುವಳಿಕೆಯನ್ನು ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:8
24 ತಿಳಿವುಗಳ ಹೋಲಿಕೆ  

ಯಾರು ಕಾರ್ಮುಗಿಲಿಗೆ ಜ್ಞಾನವನ್ನು ದಯಪಾಲಿಸಿದರು? ಉತ್ಪಾತಗಳಿಗೆ ವಿವೇಕವನ್ನು ಅನುಗ್ರಹಿಸಿದವರು ಯಾರು?


ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, ನನ್ನ ಜೀವವು ಸರ್ವಶಕ್ತನ ಶ್ವಾಸದಿಂದುಂಟಾಗಿದೆ.


ದೈವಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಶಿಕ್ಷೆಗೂ ಉಪಯುಕ್ತವಾಗಿದೆ.


ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಸಂತೋಷವನ್ನೂ ದಯಪಾಲಿಸುತ್ತಾನಲ್ಲವೆ; ಪಾಪಿಗಾದರೋ ತನ್ನ ಮೆಚ್ಚಿಕೆಯಾದವನಿಗೆ ಒದಗತಕ್ಕವುಗಳನ್ನು ಕೂಡಿಸಿಡುವ ಪ್ರಯಾಸವನ್ನೇ ನೇವಿುಸುತ್ತಾನೆ. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.


ವಿವೇಕವನ್ನು ಬೇಡಿಕೊಂಡದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಮುಂಚೆ ಇರಲಿಲ್ಲ; ಮುಂದೆಯೂ ಇರುವದಿಲ್ಲ.


ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;


ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲಶಾಸ್ತ್ರಗಳಲ್ಲಿಯೂ ವಿದ್ಯೆಗಳಲ್ಲಿಯೂ ಜ್ಞಾನ ವಿವೇಕಗಳನ್ನು ದಯಪಾಲಿಸಿದನು; ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸುವದರಲ್ಲಿ ಪ್ರವೀಣನಾದನು.


ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ ಎಂದು ಹೇಳಿಕೊಳ್ಳುವದೇ ಇಲ್ಲ.


ಅವರ ಕಿವಿಗಳನ್ನು ತೆರೆದು ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆಹಾಕುವನು.


ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಆ ಆತ್ಮನಿಗೆ ಅನುಗುಣವಾಗಿ ವಿದ್ಯಾವಾಕ್ಯವು,


ಈತನಿಗಿಂತ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೇ ಎಂದು ಹೇಳಿ ಯೋಸೇಫನಿಗೆ - ದೇವರು ಇದನ್ನೆಲ್ಲಾ ನಿನಗೇ ತಿಳಿಸಿರುವದರಿಂದ ನಿನಗೆ ಸಮಾನನಾದ ಬುದ್ಧಿ ವಿವೇಕಗಳುಳ್ಳ ಪುರುಷನು ಯಾವನೂ ಇಲ್ಲ;


ದೇವರು ಸೊಲೊಮೋನನಿಗೆ ಸಮುದ್ರತೀರದ ಉಸುಬಿನಷ್ಟು ಅಪರಿವಿುತವಾದ ಜ್ಞಾನವಿವೇಕಗಳನ್ನೂ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.


ಫರೋಹನು ತನ್ನ ಪರಿವಾರದವರಿಗೆ - ಈತನಲ್ಲಿ ದೇವರ ಆತ್ಮ ಉಂಟಲ್ಲಾ;


ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು, ಆಲೋಚನೆಯೂ ವಿವೇಕವೂ ಆತನವೇ.


ನನ್ನ ನ್ಯಾಯವನ್ನು ತಪ್ಪಿಸಿದ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತನಾಣೆ,


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇವಿುಸುವ ಸ್ಥಳಕ್ಕೆ ಕಳುಹಿಸಿ ಅಲ್ಲಿ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬದೇ ನನ್ನ ಅಪೇಕ್ಷೆಯಾಗಿದೆ ಎಂದು ಹೇಳಿ ಕಳುಹಿಸಿದನು.


ಆತನಲ್ಲಿ ಬಲವೂ ಸಾಮರ್ಥ್ಯವೂ ಉಂಟು; ತಪ್ಪಿದವನೂ ತಪ್ಪಿಸಿದವನೂ ಆತನಿಗೆ ಒಳಪಟ್ಟಿರುವರು.


ಮನುಷ್ಯನ ಆತ್ಮವು ಯೆಹೋವನ ದೀಪವಾಗಿದೆ; ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ.


ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು