Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:14 - ಕನ್ನಡ ಸತ್ಯವೇದವು J.V. (BSI)

14 ದೇವರು ಮಾತಾಡುವ ರೀತಿ ಒಂದುಂಟು ಹೌದು, ಎರಡೂ ಉಂಟು, ಮನುಷ್ಯನಾದರೋ ಲಕ್ಷಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರು ಮಾತನಾಡುವ ರೀತಿ ಒಂದುಂಟು ಹೌದು, ಎರಡೂ ಉಂಟು, ಮನುಷ್ಯನಾದರೋ ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವರು ಪದೇ ಪದೇ ಮಾತನಾಡಿದರೂ ನರಮಾನವನು ಗ್ರಹಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಒಂದುವೇಳೆ ದೇವರು ತನ್ನ ಕಾರ್ಯದ ಕುರಿತಾಗಿ ವಿವರಿಸಬಹುದು. ಒಂದುವೇಳೆ ನಮಗೆ ಅರ್ಥವಾಗದ ರೀತಿಯಲ್ಲಿ ಆತನು ಮಾತಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ದೇವರು ಮಾತನಾಡುತ್ತಾರೆ. ಹೌದು, ವಿವಿಧ ರೀತಿಯಿಂದ ಮಾತನಾಡುತ್ತಾರೆ; ಆದರೂ ಯಾರು ದೇವರ ಸ್ವರವನ್ನು ಗ್ರಹಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:14
15 ತಿಳಿವುಗಳ ಹೋಲಿಕೆ  

ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ಗಮನಿಸಲಿಲ್ಲ;


ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


ಆತನು ಅವರಿಗೆ - ಎಲಾ, ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯರೇ,


ನೋಡು, ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ ಜೀವಲೋಕದ ಬೆಳಕನ್ನು ಅನುಭವಿಸುವಂತೆ


ಆ ತೀರ್ಪು ಏನಂದರೆ - ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ; ಅದೇನಂದರೆ - ನೀವು ಕಿವಿಯಿದ್ದು ಕೇಳಿದರೂ ತಿಳುಕೊಳ್ಳುವದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವದೇ ಇಲ್ಲ.


ಅದಕ್ಕೆ ಆತನು - ನೀನು ಈ ಜನರ ಬಳಿಗೆ ಹೋಗಿ - ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,


ಯಾಕಂದರೆ ಯೆಹೋವನ ಭಯಭಕ್ತಿಗೆ ಮನಸ್ಸಿಲ್ಲದೆ ತಿಳುವಳಿಕೆಯನ್ನು ಹಗೆಮಾಡಿದರು.


ಒಂದು ಸಾರಿ ಮಾತಾಡಿದ್ದೇನೆ, ಪ್ರತಿವಾದ ಮಾಡಲಾರೆನು; ಎರಡು ಸಲ ಹೌದು, ಇನ್ನೇನೂ ನುಡಿಯಲೊಲ್ಲೆನು ಎಂದು ಯೆಹೋವನಿಗೆ ಹೇಳಿದನು.


ಅಲ್ಲಿ ದೇವರು ರಾತ್ರಿಯ ಸ್ವಪ್ನದಲ್ಲಿ ಇಸ್ರಾಯೇಲನನ್ನು - ಯಾಕೋಬನೇ, ಯಾಕೋಬನೇ ಎಂದು ಕರೆಯಲು, ಅವನು - ಇದ್ದೇನೆ ಅಂದನು.


ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಿಗೆ ಹಾಸಿಗೆಯ ಮೇಲೆ ಸ್ವಪ್ನವಾಯಿತು, ಅವನ ಮನಸ್ಸಿನಲ್ಲಿ ಕನಸುಬಿತ್ತು; ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದನು.


ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ ರಾತ್ರಿಯ ಕನಸುಗಳಿಂದ ಯೋಚನೆಗಳಲ್ಲಿರುವಾಗ ನನಗೆ


ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು