Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:24 - ಕನ್ನಡ ಸತ್ಯವೇದವು J.V. (BSI)

24 ದೇವರು ಒಂದು ವೇಳೆ ಆ ಮನುಷ್ಯನಿಗೆ ಮೆಚ್ಚಿ - ಈಡು ಸಿಕ್ಕಿತು, ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು ಎಂದು ಅಪ್ಪಣೆಕೊಟ್ಟರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, ‘ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು’ ಎಂದು ಅಪ್ಪಣೆಕೊಟ್ಟರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ‘ಇವನನ್ನು ಕಾಪಾಡಿ; ಅಧೋಲೋಕಕ್ಕೆ ತಳ್ಳಬೇಡಿ, ಬಿಡುಗಡೆ ಬೇಕಾದ ಈಡು ಇದೋ ಇಲ್ಲಿ!’ ಎಂದು ಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ‘ಇವನನ್ನು ಪಾತಾಳದಿಂದ ರಕ್ಷಿಸು! ಇವನಿಗೋಸ್ಕರ ಪ್ರಾಯಶ್ಚಿತ್ತದ ಮಾರ್ಗವೊಂದನ್ನು ಕಂಡುಕೊಂಡಿದ್ದೇನೆ’ ಎಂದು ಹೇಳಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆ ಮಧ್ಯಸ್ಥನು ಅವನನ್ನು ಕರುಣಿಸಿ ದೇವರಿಗೆ, ‘ಅಧೋಲೋಕವೆಂಬ ಕುಣಿಗೆ ಇಳಿಯುವುದರಿಂದ ಇವನನ್ನು ಕಾಪಾಡಿರಿ; ನಾನು ಇವನಿಗಾಗಿ ವಿಮೋಚನೆಯ ಕ್ರಯವನ್ನು ಕಂಡುಹಿಡಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:24
29 ತಿಳಿವುಗಳ ಹೋಲಿಕೆ  

ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು ಅವನ ಜೀವವನ್ನು ದೈವಾಸ್ತ್ರದಿಂದ ಅಳಿದುಹೋಗದ ಹಾಗೆ ನಿಲ್ಲಿಸುವನು.


ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಬಿಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯು.


[ನನ್ನ ಜನವೇ,] ನೀನು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.


ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರ ಕಡೆಯಿಂದ ತೊಲಗಿಹೋಯಿತು.


ದೇವರ ಚಿತ್ತಕ್ಕೆ ಒಡಂಬಟ್ಟು ಸಮಾಧಾನಹೊಂದು, ಇದರಿಂದ ನಿನಗೆ ಶುಭವಾಗುವದು.


ಆತನು - ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಾಗಿ ದಾಟಿಹೋಗುವಂತೆ ಮಾಡುವೆನು; ಯೆಹೋವನ ನಾಮದ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ಯಾವನ ಮೇಲೆ ದಯೆಯಿಡುವೆನೋ ಅವನ ಮೇಲೆ ದಯೆಯಿಡುವೆನು; ಯಾರನ್ನು ಕರುಣಿಸುವೆನೋ ಅವರನ್ನು ಕರುಣಿಸುವೆನು ಅಂದನು.


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ಕರ್ತನೇ, ನೀನು ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ ನಂಬಿಕೆಯೂ ಉಳ್ಳವನು.


ನೀನು ಬಹಳವಾಗಿ ಕನಿಕರಿಸಿ ನನ್ನ ಪ್ರಾಣವನ್ನು ಪಾತಾಳತಲದಿಂದ ತಪ್ಪಿಸಿದ್ದೀಯಲ್ಲಾ.


ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ನಾನು ಯಾವಾಗಲೂ ಮರೆಹೊಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ ಕೋಟೆಯೂ ಆಗಿದ್ದೀಯಲ್ಲಾ.


ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.


ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.


ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕೀತು, ನೋಡಿಕೋ! ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ!


[ಪಶ್ಚಾತ್ತಾಪದ] ಮಾತುಗಳನ್ನು ತೆಗೆದುಕೊಂಡು ಯೆಹೋವನ ಬಳಿಗೆ ಹಿಂದಿರುಗಿ ಆತನಿಗೆ - ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ [ನಮ್ಮಲ್ಲಿನ] ಒಳ್ಳೆಯದನ್ನು ಅಂಗೀಕರಿಸು; ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು.


ಅವನ ದೇಹವು ಬಾಲ್ಯಕ್ಕಿಂತಲೂ ಕೋಮಲವಾಗುವದು, ಅವನು ಪುನಃ ಎಳೆಯತನದ ದಿನಗಳನ್ನು ಅನುಭವಿಸುವನು.


ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವದು ಎಂದು ಕೀರ್ತನೆಹಾಡುವನು.


ಆತನು [ದೂತನನ್ನೋ ಎಂಬಂತೆ] ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.


ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿವಿುತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನುಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು