Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:32 - ಕನ್ನಡ ಸತ್ಯವೇದವು J.V. (BSI)

32 ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು, ಮಾತಾಡು, ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬದೇ ನನ್ನ ಆಶೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು, ಮಾತನಾಡು, ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಏನಾದರೂ ಹೇಳಬೇಕೆಂದಿದ್ದರೆ ಹೇಳು, ಉತ್ತರಕೊಡು ನನಗೆ, ನೀನು ಸತ್ಯವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಬಯಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೋಬನೇ, ನೀನು ಏನಾದರೂ ಹೇಳಬೇಕೆಂದಿದ್ದರೆ, ಅದನ್ನು ನಾನು ಕೇಳುವಂತಾಗಲಿ. ಮುನ್ನಡೆದು ಮಾತಾಡು, ಯಾಕೆಂದರೆ ನಿನ್ನನ್ನು ನೀತಿವಂತನೆಂದು ಸ್ಥಾಪಿಸಲು ನನಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಿನಗೆ ಹೇಳುವುದಕ್ಕೆ ಏನಾದರೂ ಇದ್ದರೆ ಹೇಳು, ನನಗೆ ಉತ್ತರಕೊಡು, ಮಾತನಾಡು, ಏಕೆಂದರೆ ನಾನು ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:32
7 ತಿಳಿವುಗಳ ಹೋಲಿಕೆ  

ನೀವು ನ್ಯಾಯವಂತರೆಂದು ನಾನು ಒಪ್ಪುವದು ದೂರವಾಗಿರಲಿ, ಸಾಯುವ ತನಕ ನನ್ನ ಯಥಾರ್ಥತ್ವದ ಹೆಸರನ್ನು ಕಳಕೊಳ್ಳೆನು.


ಆಹಾ, ನಿಮ್ಮ ಯೋಚನೆಗಳನ್ನು ಬಲ್ಲೆ, ನೀವು ನನಗೆ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ತಿಳಿದುಕೊಂಡಿದ್ದೇನೆ.


ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು, ನನ್ನೆದುರಿನಲ್ಲಿಯೇ ವಾದವನ್ನು ಹೂಡಿ ನಿಂತುಕೋ.


ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು, ನಾನೇ ಮಾತಾಡುವೆನು.


ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು, ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು