Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:10 - ಕನ್ನಡ ಸತ್ಯವೇದವು J.V. (BSI)

10 ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡಾನೆಂಬ ಯೋಚನೆಯೂ ಸರ್ವಶಕ್ತನು ಅನ್ಯಾಯವನ್ನು ನಡಿಸಾನೆಂಬ ಭಾವನೆಯೂ ದೂರವಾಗಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾನೆಂಬ ಯೋಚನೆಯೂ, ಸರ್ವಶಕ್ತನಾದ ದೇವರು ಅನ್ಯಾಯವನ್ನು ನಡೆಸುತ್ತಾನೆಂಬ ಭಾವನೆಯೂ ದೂರವಾಗಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗಿರಲು ಬುದ್ದಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ ದೇವರು ಕೆಟ್ಟದ್ದನ್ನು ಮಾಡಿಯಾನೆಂಬ ಯೋಚನೆ ದೂರವಿರಲಿ ಸರ್ವಶಕ್ತನು ಅನ್ಯಾಯವನು ಎಸಗಿಯಾನೆಂಬ ಭಾವನೆ ಬಾರದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆದ್ದರಿಂದ ಬುದ್ಧಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ. ದೇವರು ಕೆಟ್ಟದ್ದನ್ನು ಎಂದಿಗೂ ಮಾಡುವುದಿಲ್ಲ. ಸರ್ವಶಕ್ತನಾದ ದೇವರು ಎಂದಿಗೂ ತಪ್ಪು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಆದ್ದರಿಂದ ಬುದ್ಧಿವಂತರೇ, ನಾನು ಹೇಳುವುದನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾರೆಂಬ ಯೋಚನೆ ದೂರವಿರಲಿ. ಸರ್ವಶಕ್ತರು ಅನ್ಯಾಯವನ್ನು ಎಸಗುತ್ತಾರೆಂಬ ಭಾವನೆ ದೂರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:10
19 ತಿಳಿವುಗಳ ಹೋಲಿಕೆ  

ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನು ನೀತಿಯನ್ನು ಡೊಂಕುಮಾಡುವನೋ?


ಹೀಗಿರುವಲ್ಲಿ ನಿಮಗೆ ಯೆಹೋವನ ಭಯವು ಇರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ ಮುಖದಾಕ್ಷಿಣ್ಯವೂ ಲಂಚತಿನ್ನುವದೂ ಇಲ್ಲವಾದದರಿಂದ ಜಾಗರೂಕತೆಯಿಂದ ಕೆಲಸಮಾಡಿರಿ ಎಂದು ಎಚ್ಚರಿಸಿದನು.


ಯಾವನಾದರೂ ಪಾಪಮಾಡುವದಕ್ಕೆ ಪ್ರೇರೇಪಿಸಲ್ಪಡುವಾಗ - ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ದೇವರು ಕೆಟ್ಟದ್ದಕ್ಕೇನೂ ಸಂಬಂಧಪಟ್ಟವನಲ್ಲ; ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸುವದಿಲ್ಲ.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -


ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.


ಆತನ ಮಾರ್ಗವನ್ನು ಆತನಿಗೆ ಯಾರು ನೇವಿುಸಿದರು? ನೀನು ಅನ್ಯಾಯವನ್ನು ನಡಿಸಿದಿ ಎಂದು ಹೇಳಬಲ್ಲವರಾರು?


ವ್ಯಭಿಚಾರಿಯೋ ಕೇವಲ ಬುದ್ಧಿಶೂನ್ಯನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.


ಇಂಥ ಸರ್ವಶಕ್ತನನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ ಪರಿಪೂರ್ಣಧರ್ಮವನ್ನಾಗಲಿ ಕುಂದಿಸುವದಿಲ್ಲ.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?


ಶಿಕ್ಷೆಯನ್ನೊಲ್ಲದವನು ತನ್ನನ್ನೇ ನಿರಾಕರಿಸುವನು; ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.


ಬುದ್ಧಿವಂತರೂ ನನ್ನ ಕಡೆಗೆ ಕಿವಿಗೊಡುವ ಪ್ರತಿಯೊಬ್ಬ ಜ್ಞಾನಿಯೂ [ನಿನ್ನ ವಿಷಯವಾಗಿ] -


ಹೌದು, ದೇವರು ಕೆಟ್ಟದ್ದನ್ನು ನಡಿಸುವದೇ ಇಲ್ಲ, ಸರ್ವಶಕ್ತನು ನೀತಿಯನ್ನು ಡೊಂಕು ಮಾಡುವದೇ ಇಲ್ಲ.


ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.


ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು; ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆತೋರಿಸುವವನು.


ಅದರ ಮಧ್ಯೆ ನೆಲೆಗೊಂಡಿರುವ ಯೆಹೋವನು ನ್ಯಾಯಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಬೆಳಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು