Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:20 - ಕನ್ನಡ ಸತ್ಯವೇದವು J.V. (BSI)

20 ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲೇ ಸಾಯುವರು, ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕ್ಷಣ ಮಾತ್ರದೊಳಗೆ ಸಾಯುವರು; ಮಧ್ಯರಾತ್ರಿಯಲ್ಲೇ ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕ್ಷಣಮಾತ್ರದೊಳು, ನಡುರಾತ್ರಿಯೊಳು ಸತ್ತುಹೋಗುವರು ನಾಡಿನ ಪ್ರಜೆಗಳು ತಲ್ಲಣಗೊಂಡು ಇಲ್ಲದೆಹೋಗುವರು ಮನುಷ್ಯರ ಕೈಸೋಂಕದೆಯೆ ಪರಾಕ್ರಮಿಗಳು ಮಾಯವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಒಬ್ಬನು ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲಿ ಸಾಯಬಹುದು. ಜನರು ಕಾಯಿಲೆಯಿಂದ ಸಾಯಬಹುದು. ದುಷ್ಟರು ಸಹ ಯಾವುದೇ ಕಾರಣವಿಲ್ಲದೆ ಸಾಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಜನರು ಮಧ್ಯರಾತ್ರಿಯಲ್ಲಿ ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಅವರು ತಲ್ಲಣಗೊಂಡು ಇಲ್ಲದೆ ಹೋಗುತ್ತಾರೆ; ಪರಾಕ್ರಮಿಗಳು ಸಹ ಮಾನವರ ಕೈ ಒಳಪಡದೆ ಗತಿಸಿಹೋಗುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:20
25 ತಿಳಿವುಗಳ ಹೋಲಿಕೆ  

ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ರಾತ್ರಿಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.


ಆ ಘನವನ್ನು ಅವನು ದೇವರಿಗೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.


ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ನೀನು ನೋಡುತ್ತಿರಲಾಗಿ [ಬೆಟ್ಟದೊಳಗಿಂದ] ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು [ಸಿಡಿದು ಬಂದು] ಆ ಪ್ರತಿಮೆಯ ಕಬ್ಬಿಣಮಣ್ಣಿನ ಹೆಜ್ಜೆಗಳಿಗೆ ಬಡಿದು ಚೂರುಚೂರು ಮಾಡಿತು.


ಅವನು ಒಂದು ದಿವಸ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್‍ಹದ್ದೋನನು ಅರಸನಾದನು.


ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.


ಎತ್ತರವಾದ ಗೋಡೆಯ ಒಂದು ಭಾಗವು ಬೊಗ್ಗುತ್ತಾ ತಟ್ಟನೆ ಕ್ಷಣ ಮಾತ್ರದಲ್ಲಿ ಕವಚಿಕೊಳ್ಳುವ ಹಾಗೆ ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವದು.


ಅವರು ನಿವಿುಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.


ಜನಾಂಗಗಳು ತಟ್ಟನೆ ನಿರ್ಮೂಲವಾಗುವ ರಾತ್ರಿಯನ್ನು ಬಯಸಬೇಡ.


ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಬ್ಬಿಬಿಡುವನು.


ಇದಲ್ಲದೆ ದಾವೀದನು - ಯೆಹೋವನಾಣೆ, ಅವನು ಯೆಹೋವನಿಂದ ಸಾಯುವನು; ಇಲ್ಲವೆ ಕಾಲತುಂಬಿ ಮೃತಿಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.


ಆದರೆ ಅರ್ಧರಾತ್ರಿಯಲ್ಲಿ - ಇಗೋ, ಮದಲಿಂಗನು! ಅವನನ್ನು ಎದುರುಗೊಳ್ಳುವದಕ್ಕೆ ಹೊರಡಿರಿ ಎಂಬ ಕೂಗಾಯಿತು.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ


ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವದು;


ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ ರಾತ್ರಿಯಲ್ಲಿ ಅವರನ್ನು ಕೆಡವಿ ನಾಶಕ್ಕೆ ಗುರಿಮಾಡುವನು.


ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸಿ ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.


ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು