Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:26 - ಕನ್ನಡ ಸತ್ಯವೇದವು J.V. (BSI)

26 ಅಪರಾಧಿಗಳಿಗೋ ಎಂಬಂತೆ ಬಹಿರಂಗವಾಗಿ ಅವರಿಗೆ ಪೆಟ್ಟು ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಪರಾಧಿಗಳಿಗೋ ಎಂಬಂತೆ ಬಹಿರಂಗವಾಗಿ ಅವರಿಗೆ ಪೆಟ್ಟುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಪರಾಧಿಗಳಂತೆ ಅವರನು ದಂಡಿಸುವನು ಎಲ್ಲರು ನೋಡುವಂತೆ ಅವರನು ಖಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ದೇವರು ದುಷ್ಟರನ್ನು ಅವರ ದುಷ್ಕೃತ್ಯಗಳ ನಿಮಿತ್ತ ಬಹಿರಂಗವಾಗಿ ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರ ದುಷ್ಟತನಕ್ಕಾಗಿ ದೇವರು ಎಲ್ಲರು ನೋಡುವಂತೆ ಅವರನ್ನು ಶಿಕ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:26
16 ತಿಳಿವುಗಳ ಹೋಲಿಕೆ  

ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಕೆಲವರ ಪಾಪಕೃತ್ಯಗಳು ಪ್ರಸಿದ್ಧವಾಗಿದ್ದು ಅವರು ಇಂಥವರೆಂದು ಮೊದಲೇ ತಿಳಿಯಪಡಿಸುತ್ತವೆ; ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ.


ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು; ಇವರಿಂದ ವಿುಕ್ಕಾದವರಿಗೂ ಭಯವುಂಟಾಗುವದು.


ಅವರು ಆಚೆ ಹೋಗಿ ನನಗೆ ದ್ರೋಹಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವದಿಲ್ಲ, ಸುಡುವ ಬೆಂಕಿಯು ಆರುವದಿಲ್ಲ; ಅವು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.


ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಡುವರು.


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಗೆ ತಪ್ಪಿಸಿದನು. ಐಗುಪ್ತ್ಯರು ಸತ್ತು ಸಮುದ್ರತೀರದಲ್ಲಿ ಬಿದ್ದಿರುವದನ್ನು ಇಸ್ರಾಯೇಲ್ಯರು ಕಂಡರು.


ಆತನು ದುಷ್ಟರ ಪ್ರಾಣವನ್ನು ಉಳಿಸುವದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು.


ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟಿಯಾ?


ನೀನು ಜನಾಂಗಗಳನ್ನು ಭಂಗಿಸಿ ದುಷ್ಟರನ್ನು ನಾಶಮಾಡಿದ್ದೀ; ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದೀ;


ಯೆಹೋವನು ನೀತಿವಂತರನ್ನೂ ಅನೀತಿವಂತರನ್ನೂ ಪರೀಕ್ಷಿಸುತ್ತಾನೆ; ಬಲಾತ್ಕಾರಿಗಳನ್ನು ದ್ವೇಷಿಸುತ್ತಾನೆ.


ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶನವಾಗುವರು; ಹೌದು, ಯೆಹೋವನನ್ನು ತೊರೆದವರು ನಿರ್ಮೂಲರಾಗುವರು.


ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು [ನಿನ್ನ ವಿುಂಡರಿಗೆ] ಇನ್ನು ಹಣಕೊಡದಿರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು