Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:27 - ಕನ್ನಡ ಸತ್ಯವೇದವು J.V. (BSI)

27 ಅವರು ಆತನನ್ನು ಹಿಂಬಾಲಿಸದೆ ತಿರುಗಿಕೊಂಡು ಆತನ ಮಾರ್ಗಗಳನ್ನೆಲ್ಲಾ ಅಲಕ್ಷ್ಯ ಮಾಡಿದ್ದರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರು ಆತನನ್ನು ಹಿಂಬಾಲಿಸದೆ, ತಿರುಗಿಕೊಂಡು ಆತನ ಮಾರ್ಗಗಳನ್ನೆಲ್ಲಾ ಅಲಕ್ಷ್ಯಮಾಡಿದ್ದರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ದೇವರ ಮಾರ್ಗಗಳೆಲ್ಲವನು ಅವರು ಅಲಕ್ಷ್ಯಮಾಡಿದರು ಆತನಿಗೆ ವಿಧೇಯರಾಗದೆ ತಿರುಗಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯಾಕೆಂದರೆ ದುಷ್ಟರು ದೇವರಿಗೆ ವಿಧೇಯರಾಗಲಿಲ್ಲ; ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರು ದೇವರನ್ನು ಹಿಂಬಾಲಿಸದೆ, ದೇವರ ಮಾರ್ಗಗಳನ್ನೆಲ್ಲಾ ಅಲಕ್ಷ್ಯ ಮಾಡಿದ್ದರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:27
18 ತಿಳಿವುಗಳ ಹೋಲಿಕೆ  

ಕಿನ್ನರಿ, ವೀಣೆ, ದಮ್ಮಡಿ, ಕೊಳಲು, ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು; ಯೆಹೋವನ ಕೆಲಸವನ್ನೋ ಅವರು ಲಕ್ಷಿಸರು, ಆತನ ಹಸ್ತಕಾರ್ಯವನ್ನು ಆಲೋಚಿಸರು.


ಅವರು ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದದರಿಂದ ಆತನು ಅವರನ್ನು ಹಾಳು ಮಾಡುವನೇ ಹೊರತು ವೃದ್ಧಿಪಡಿಸುವದಿಲ್ಲ.


ನಾವಾದರೋ ಹಿಂದೆಗೆದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಪ್ರಾಣರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು; ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ.


ಪೌಲನು - ನಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫೂಲ್ಯದಲ್ಲಿ ನಮ್ಮನ್ನು ಬಿಟ್ಟವನನ್ನು ಕರೆದುಕೊಂಡು ಹೋಗುವದು ತಕ್ಕದಲ್ಲವೆಂದು ನೆನಸಿದನು.


ಯೆಹೋವನನ್ನು ಆಶ್ರಯಿಸದೆ ಯೆಹೋವನ ದರ್ಶನವನ್ನು ಬಯಸದೆ ಯೆಹೋವನ ಮಾರ್ಗಬಿಟ್ಟವರನ್ನೂ ಧ್ವಂಸಪಡಿಸುವೆನು.


ಎತ್ತು ಯಜಮಾನನನ್ನು, ಕತ್ತೆ ಒಡೆಯನ [ಕೊಟ್ಟಿಗೆಯ] ಗೋದಲಿಯನ್ನು ತಿಳಿದಿರುವವು; ಇಸ್ರಾಯೇಲ್ ಜನರಿಗೋ ತಿಳುವಳಿಕೆಯಿಲ್ಲ, ನನ್ನ ಪ್ರಜೆಯು ಆಲೋಚಿಸುವದಿಲ್ಲ.


ಯೆಹೋವನು ಡೊಂಕುದಾರಿಹಿಡಿದವರನ್ನು ಪಾತಕಿಗಳ ಗತಿಗೆ ಹೋಗಮಾಡಲಿ. ಇಸ್ರಾಯೇಲ್ಯರಿಗೆ ಶುಭವುಂಟಾಗಲಿ.


ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.


ಆದರೆ ಇವರೇ ದೇವರನ್ನು ಕುರಿತು - ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳುವಳಿಕೆಯೇ ನಮಗೆ ಬೇಡ ಎಂದೂ


ರೆಮಲ್ಯನ ಮಗನಾದ ಪೆಕಹ ಎಂಬವನು ಒಂದೇ ದಿವಸ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ರಣವೀರರು. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟದ್ದೇ ಇದಕ್ಕೆ ಕಾರಣ.


ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ; ಗದರಿಕೆಯನ್ನು ಕೇಳಲೊಲ್ಲದವನಿಗೆ ಸಾವು.


ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶನವಾಗುವರು; ಹೌದು, ಯೆಹೋವನನ್ನು ತೊರೆದವರು ನಿರ್ಮೂಲರಾಗುವರು.


ನಿನ್ನನ್ನು ದಾರಿಯಲ್ಲಿ ನಡಿಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡಿಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು